ಟಿಬೆಟ್: ಟಿಬೆಟ್ನಲ್ಲಿ ಗುರುವಾರ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ದುರಂತದಲ್ಲಿ ಕನಿಷ್ಠ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಗುರುವಾರ ರಾತ್ರಿ
10:33ಕ್ಕೆ ಭೂಕಂಪ ಸಂಭವಿಸಿದ್ದು, ಉತ್ತರದ ಪ್ರಾದೇಶಿಕ ನಗರವಾದ ನಾಗ್ಕ್ಯೂನಲ್ಲಿ ಹಲವು ಮನೆಗಳು ನೆಲಸಮಗೊಂಡಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಗಾಯಗೊಂಡವರಲ್ಲಿ ಕೆಲವರ ಜನರ ಸ್ಥಿತಿ ಗಂಭೀರವಾಗಿದೆ.
ಭೂಕಂಪದ ಕೇಂದ್ರಬಿಂದುವು ನಾಗ್ಕ್ಯೂನಿಂದ ಈಶಾನ್ಯಕ್ಕೆ ಸುಮಾರು 190 ಕಿಲೋಮೀಟರ್ ಮತ್ತು ಪ್ರಾದೇಶಿಕ ರಾಜಧಾನಿ ಲ್ಹಾಸಾ ದಿಂದ ಈಶಾನ್ಯಕ್ಕೆ 390 ಕಿಲೋಮೀಟರ್ ದೂರದಲ್ಲಿರುವ ಬಾಚೆನ್ ಕೌಂಟಿಯ ಮಾಋು ಪ್ರದೇಶದಲ್ಲಿತ್ತು. 18 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ವರದಿಗಳು ಹೇಳಿವೆ.
ಈ ಪ್ರದೇಶದಲ್ಲಿ ವಿದ್ಯುತ್ ಮತ್ತು ದೂರಸಂಪರ್ಕ ಸೇವೆಗಳು ಸ್ಥಗಿತಗೊಂಡಿವೆ. ತುರ್ತು ಕಾರ್ಯಾಚರಣೆ ನಡೆಯುತ್ತಿದೆ
ಪರಿಹಾರ ಕಾರ್ಯಕ್ಕಾಗಿ ಪೊಲೀಸ್ ಅಧಿಕಾರಿಗಳು, ಪ್ರಾದೇಶಿಕ ಅಗ್ನಿಶಾಮಕ ಮತ್ತು ರಕ್ಷಣಾಪಡೆಯು ಕಾರ್ಯಾಚರಣೆ ನಡೆಸುತಿದೆ.









