ಸುಳ್ಯ:ಟಿಂಕರಿಂಗ್ ಲ್ಯಾಬ್ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಅಗತ್ಯವಾಗಿದೆ. ವಿದ್ಯಾರ್ಥಿಗಳು ಪ್ರಾಯೋಗಿಕ ಚಟುವಟಿಕೆಗಳ ಮೂಲಕ ವಿಜ್ಞಾನವನ್ನು ಕಲಿಯಬೇಕು ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಅವರು ಹೇಳಿದರು.ಸ್ನೇಹ ಶಾಲೆಯಲ್ಲಿ
2024 -25ರ ಶೈಕ್ಷಣಿಕ ವರ್ಷದಲ್ಲಿ ರೈಟ್ ಟು ಲಿವ್ ಪ್ರಾಯೋಜಕತ್ವದಲ್ಲಿ ಆರಂಭವಾದ ಟಿಂಕರಿಂಗ್ ಲ್ಯಾಬ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ಟಾನ್ 90 ಲ್ಯಾಬ್ನ ತರಬೇತುದಾರ ಜಯಂತ್ ಉಪಸ್ಥಿತರಿದ್ದರು. ಸ್ನೇಹ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯನಿ ಜಯಲಕ್ಷ್ಮಿ ದಾಮ್ಲೆ ಸ್ವಾಗತಿಸಿ, ವಿಜ್ಞಾನ ಶಿಕ್ಷಕಿ ಪ್ರತಿಮಾ ಕುಮಾರಿ ಕೆ ಎಸ್. ಧನ್ಯವಾದವಿತ್ತರು.