ಸುಳ್ಯ:ವಿಶ್ವೇಶ್ವರಾಯ ತಾಂತ್ರಿಕ ಮಹಾವಿದ್ಯಾಲಯ, ಬೆಳಗಾವಿ, ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ 25ನೇ ವಿ.ಟಿ.ಯು ರಾಜ್ಯಮಟ್ಟದ ಅತ್ಲೆಟಿಕ್ ಮೀಟ್ನಲ್ಲಿ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯ, ಸುಳ್ಯ ಇದರ ಕಂಪ್ಯೂಟಕ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ 6ನೇ ಸೆಮಿಸ್ಟರ್ ವಿದ್ಯಾರ್ಥಿ ಟಿಷನ್ ಮಾದಪ್ಪ ಅವರು
5,000 ಮೀಟರ್, 10,000ಮೀಟರ್ ಮತ್ತು 21ಕಿಲೋ ಮೀಟರ್ ಹಾಫ್ ಮ್ಯಾರಥಾನ್ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ಹ್ಯಾಟ್ರಿಕ್ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.
ಇವರ ಶ್ರೇಷ್ಠ ಸಾಧನೆಗೆ ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಸುಳ್ಯ, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಡಾ. ಪ್ರಜ್ಞಾ ಎಂ.ಆರ್., ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ್ ಎಸ್. ಬೇಲೆಗದ್ದೆ ಮತ್ತು ಕ್ರೀಡಾ ಚಟುವಟಿಕೆಗಳ ಮುಖ್ಯ ಸಂಯೋಜಕರಾದ ಪ್ರೊ. ಅಜಿತ್ ಬಿ.ಟಿ. ಅಭಿನಂದಿಸಿದ್ದಾರೆ.