ಸುಳ್ಯ: ದಿವಂಗತ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿಯವರಿಗೆ ಖಾಯಂ ಸರಕಾರಿ ಉದ್ಯೋಗ ನೀಡಬೇಕು. ಅದೇ ರೀತಿ ಕಳೆದ ವರ್ಷ ಹತ್ಯೆಯಾದ ಬೆಳ್ಳಾರೆ ಕಳಂಜದ ಮಸೂದ್, ಸುರತ್ಕಲ್ ಫಾಸಿಲ್ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಮತ್ತು ಅವರ ಕುಟುಂಬದ
ಸದಸ್ಯರಿಗೆ ಖಾಯಂ ಸರಕಾರಿ ಉದ್ಯೋಗ ನೀಡಬೇಕು ಎಂದು ಕೆಪಿಸಿಸಿ ವಾಕ್ತರ ಟಿ.ಎಂ.ಶಾಹಿದ್ ತೆಕ್ಕಿಲ್ ಮುಖ್ಯಮಂತ್ರಿಗಳನ್ನು ಹಾಗೂ ಉಪಮುಖ್ಯಮಂತ್ರಿಗಳನ್ನು ವಿನಂತಿಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಸರಕಾರ ಗುತ್ತಿಗೆ ಆಧಾರದಲ್ಲಿ ನೀಡಿದ ಉದ್ಯೋಗವನ್ನು ಖಾಯಂಗೊಳಿಸಬೇಕು. ಫಾಸಿಲ್, ಮಸೂದ್ ಕುಟುಂಬಕ್ಕೂ ಪರಿಹಾರ ನೀಡಬೇಕು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎಲ್ಲರನ್ನು ಒಂದೇ ರೀತಿಯಲ್ಲಿ ಕಂಡು ಸಾಮಾಜಿಕ ನ್ಯಾಯ ಒದಗಿಸಲಿಬೇಕು ಎಂದು ಟಿ.ಎಂ.ಶಾಹಿದ್ ತೆಕ್ಕಿಲ್ ಒತ್ತಾಯಿಸಿದ್ದಾರೆ.