ಬೆಂಗಳೂರು: ಕಾಂಗ್ರೆಸ್ ಪಕ್ಷವು ಚುನಾವಣೆಗೆ ಮುನ್ನ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳು ಮುಂದಿನ ದಿನಗಳಲ್ಲಿ ಜಾರಿಯಾಗುವುದು ನಿಶ್ಚಿತ. ಕಾಂಗ್ರೆಸ್ ಪಕ್ಷ ಜಾರಿ ಮಾಡುವ ಗ್ಯಾರಂಟಿ ಯೋಜನೆಗಳು
30 ಸಾವಿರಕ್ಕಿಂತ ಕೆಳಗೆ ಆದಾಯ ಇರುವವರಿಗೆ ಮತ್ತು ಬಿ.ಪಿ.ಎಲ್.ಕಾರ್ಡ್ ದಾರರಿಗೆ ಮಾತ್ರ ನೀಡಬೇಕು ಎಂದು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಹೇಳಿದ್ದಾರೆ. ಈ ಯೋಜನೆ ಅರ್ಹ ಬಡವರಿಗೆ ಮಾತ್ರ ತಲುಪಲಿ. ಬಿಜೆಪಿ ನಾಯಕರು ರಾಜ್ಯದಲ್ಲಿ ಕೇಂದ್ರದಲ್ಲಿ ಪಕ್ಷ ನೀಡಿದ ಬಹುತೇಕ ಭರವಸೆಗಳು ಇನ್ನೂ ಮರೀಚಿಕೆಯಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ಜನಪರವಾದ ಆಡಳಿತ ನಡೆಯುತ್ತದೆ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಶಹೀದ್ ಹೇಳಿದ್ದಾರೆ.