ಬೆಂಗಳೂರು: ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಅವರು ಬೆಂಗಳೂರಿನ ವಿಧಾನ ಸೌಧದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಅರನ್ನು ಭೇಟಿಯಾಗಿ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ನೀಡುತ್ತಿದ್ದ
ಕಬ್ಬಿಣಾಂಶ ಮಾತ್ರೆ, ಹುಳದ ಮಾತ್ರೆ ಮತ್ತು ಹೆಣ್ಣು ಮಕ್ಕಳ ಸ್ಯಾನಿಟರ್ ಪ್ಯಾಡ್ ವಿತರಣೆಯನ್ನು ಸುಚಿ ಯೋಜನೆ ಸಮರ್ಪಕವಾಗಿ ಮುಂದುವರಿಸಲು ಮನವಿ ಸಲ್ಲಿಸಿದರು. ಗ್ರಾಮೀಣ ಪ್ರದೇಶದಲ್ಲಿ ಆಗುವ ತೊಂದರೆಗಳ ಬಗ್ಗೆ ಗಮನ ಸೆಳೆದರು ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಐ.ಎ.ಎಸ್. ಮತ್ತು ಆರೋಗ್ಯ ಇಲಾಖೆಯ ಆಯುಕ್ತರಾದ ರಣದೀಪ್ ಐ.ಎ.ಎಸ್ ಇವರಿಗೆ ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಲು ಆದೇಶಿಸಿದರು.