ಸುಳ್ಯ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಇಪ್ಪತ್ತಕ್ಕೂ ಹೆಚ್ಚು ಸ್ಥಾನವನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದ್ದು ಈ ಗೆಲುವಿಗೆ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನಗೊಂಡಿರುವಂತಹ 5 ಗ್ಯಾರಂಟಿ ಯೋಜನೆಗಳು ಕಾರಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಟಿ ಎಂ ಶಹೀದ್ ತೆಕ್ಕಿಲ್ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಅವರು ಬಿಜೆಪಿಗೆ ಅಭಿವೃದ್ಧಿ ಪರ ದೃಷ್ಠಿಕೋನ, ಜನಪರ ಯೋಚನೆಗಳು ಇಲ್ಲಾ ಈ ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ ಎಂದು ಹೇಳಿದರು. ದೇಶದಲ್ಲಿ ಇಂಡಿಯಾ ಮೈತ್ರಿ ಜಯಿಸಲಿದ್ದು ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಗೆ ನೀಡಿರುವಂತಹ ಏಳು ಗ್ಯಾರಂಟಿ ಯೋಜನೆಗಳು ಫಲಪ್ರದವಾಗಲಿದೆ. ಅರೆ ಭಾಷೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡ ಸದಾನಂದ ಮಾವಜಿ ಹಾಗೂವಎಲ್ಲಾ ನಾಮನಿರ್ದೇಶನ ಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ
ಪತ್ರಿಕಾಗೋಷ್ಠಿಯಲ್ಲಿ ನಗರ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಸಿದ್ದೀಕ್ ಕೊಕ್ಕೋ, ಗ್ಯಾರೆಂಟಿ ಅನುಷ್ಠಾನ ಜಿಲ್ಲಾ ಸಮಿತಿ ಸದಸ್ಯ ರಂಜಿತ್ ರೈ ಮೇನಾಲ ಮುಖಂಡ ಹನೀಫ್ ಬೀಜದಕೊಚ್ಚಿ ಉಪಸ್ಥಿತರಿದ್ದರು.







