ಚೆನ್ನೈ:ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷಕ್ಕೆ ವಿಸಿಕೆ ಹಾಗೂ ಐಯುಎಂಎಲ್ ಬೇಷರತ್ ಬೆಂಬಲ ನೀಡಿದೆ.ಈ ಹಿನ್ನಲೆಯಲ್ಲಿ ವಿಜಯ್ ನೇತೃತ್ವದಲ್ಲಿ ಟಿವಿಕೆ ಸರಕಾರ ರಚನೆಗೆ ಹಾದಿ ಸುಗಮವಾಗಿದೆ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಹಾಗೂ
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಟಿವಿಕೆ ಮುಖ್ಯಸ್ಥ ವಿಜಯ್ ಅವರಿಗೆ ಅಧಿಕೃತ ಬೆಂಬಲ ಪತ್ರ ಹಸ್ತಾಂತರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದರೊಂದಿಗೆ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಒಗ್ಗೂಡಿಸುವಲ್ಲಿ ಟಿವಿಕೆಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.
ಸರ್ಕಾರ ರಚನೆ ಸಂಬಂಧ ಕಳೆದ ಕೆಲವು ದಿನಗಳಿಂದ ಟಿವಿಕೆ ನಾಯಕತ್ವ ವಿವಿಧ ಪಕ್ಷಗಳೊಂದಿಗೆ ಸಂಪರ್ಕದಲ್ಲಿತ್ತು. ವಿಸಿಕೆ ಹಾಗೂ ಐಯುಎಂಎಲ್ ಬೆಂಬಲದ ಬಳಿಕ ರಾಜಕೀಯ ಬೆಳವಣಿಗೆಗಳು ಮತ್ತಷ್ಟು ವೇಗ ಪಡೆದಿವೆ.
ಈ ಮಧ್ಯೆ, ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಟಿವಿಕೆ ಮುಖ್ಯಸ್ಥ ವಿಜಯ್ ರಾಜ್ಯಪಾಲರನ್ನು ಭೇಟಿ ಮಾಡಲು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಅವರು ಬೆಂಬಲ ಪಟ್ಟಿಯೊಂದಿಗೆ ರಾಜ್ಯಪಾಲರನ್ನು ಭೇಟಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.











