ಚೆನ್ನೈ: ಭಾರೀ ಮಳೆಗೆ ಮಿಳುನಾಡು ಮತ್ತೆ ತತ್ತರಿಸಿ ಹೋಗಿದೆ. ರಾಜ್ಯದ 4 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಮಳೆಯಿಂದ ಅನೇಕ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಮಿಚಾಂಗ್ ಚಂಡಮಾರುತಕ್ಕೆ ಇಡೀ ತಮಿಳುನಾಡು ತತ್ತರಿಸಿ ಹೋಗಿತ್ತು. ಇದೀಗ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ತಿರುನೆಲ್ವಿಲಿ, ತೆಂಕಾಶಿ, ಕನ್ಯಾಕುಮಾರಿ, ತೂತುಕುಡಿ ಜಿಲ್ಲೆಗಳಲ್ಲಿ
ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.ಕಳೆದ 2 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ತುತುಕೊಡಿ, ಕನ್ಯಾಕುಮಾರಿ ಸೇರಿ ಹಲವೆಡೆ ವರುಣಾರ್ಭಟ ಮುಂದುವರಿದಿದೆ. ರಸ್ತೆಗಳು ಜಲಾವೃತವಾಗಿದ್ದರೆ, ಮನೆಗಳಿಗೆ ನೀರು ನುಗ್ಗಿದೆ. ಕೆಲವರು ಮನೆಯಿಂದ ಹೊರಬರದಂತಹ ಸ್ಥಿತಿ ನಿರ್ಮಾಣವಾಗಿದೆ. ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಗಿಳಿದಿದ್ದಾರೆ.

ತೂತುಕುಡಿ ಪಟ್ಟಣದಲ್ಲಿ ಜನಜೀವನ ಅವ್ಯವ್ಯಸ್ತವಾಗಿದೆ. ಮಳೆಯಿಂದಾಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಗಳು ಹಾಗೂ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತವಾಗಿದೆ.
ಕನ್ಯಾಕುಮಾರಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನೂರಾರು ಅಂಗಡಿ, ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಜನವಸತಿ ಪ್ರದೇಶಕ್ಕೆ ನೀರು ನುಗ್ಗಿದ್ದರಿಂದ ಜನರು ಪರದಾಡಿದ್ದಾರೆ.
ತಮಿಳುನಾಡಿನ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ ಮತ್ತು ತೆಂಕಾಶಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ, ಸಾರ್ವಜನಿಕ ಸಂಸ್ಥೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಇತ್ತೀಚಿನ ಹವಾಮಾನ ವರದಿಯ ಪ್ರಕಾರ, ಡಿಸೆಂಬರ್ 18 ರಂದು ತಮಿಳುನಾಡು, ಕೇರಳ ಮತ್ತು ಮಾಹೆಯ ವಿವಿಧ ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.














