ಸುಳ್ಯ:ಅಗತ್ಯ ವಸ್ತುಗಳ ಬೆಲೆ, ಹಾಗೂ ಗ್ಯಾಸ್ ಸಿಲಿಂಡರ್, ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯ ಯುವ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ ವಿರುದ್ಧ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ , ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಎನ್ ಜಯಪ್ರಕಾಶ್ ರೈ,ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ, ನಿಯೋಜಿತ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ,
ಗ್ಯಾರಂಟಿ ಅನುಷ್ಠಾನ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಮುಖಂಡರಾದ ಅಶೋಕ್ ಅಡಮಲೆ, ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷ ಕೆ ಎಂ ಮುಸ್ತಫಾ ಜನತಾ, ಸುಳ್ಯ ವಿಧಾನಸಭಾ ಕ್ಷೇತ್ರ ಯೂತ್ ಕಾಂಗ್ರೆಸ್ ಅಧ್ಯಕ್ಷ ಫೈಝಲ್ ಕಡಬ ಉದ್ದೇಶಿಸಿ ಮಾತನಾಡಿದರು.ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ಸ್ವಾಗತಿಸಿದರು.ಪ್ರತಿಭಟನಾ ಸೂಚಕವಾಗಿ ಗ್ಯಾಸ್ ಸಿಲಿಂಡರ್ ಇಟ್ಟು ರಸ್ತೆ ತಡೆ ಮಾಡಿದರು.
ಪ್ರತಿಭಟನಾ ಸಭೆಯಲ್ಲಿ ಯುವ ಕಾಂಗ್ರೆಸ್ ಸುಳ್ಯ ವಿಧಾನಸಭಾ ಉಪಾಧ್ಯಕ್ಷ ರಂಜಿತ್ ರೈ ಮೇನಾಲ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆಶಿಕ್ ಆರಂತೋಡು, ಬ್ಲಾಕ್ ಕಾಂಗ್ರೆಸ್ ಮುಖಂಡರುಗಳಾದ ಇಕ್ಪಾಲ್ ಎಲಿಮಲೆ,ಸತ್ಯ ಕುಮಾರ್ ಅಡಿಂಜ,ಎಸ್ ಸಂಶುದ್ದೀನ್ ಅರಂಬೂರು, ಭವಾನಿಶಂಕರ ಕಲ್ಮಡ್ಕ,ಸಿದ್ದೀಕ್ ಕೊಕ್ಕೋ, ಡೇವಿಡ್ ಧೀರಾ ಕ್ರಾಸ್ತಾ, ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ರಾಜು ಪಂಡಿತ್, ಧರ್ಮ ಪಾಲ ಕೊಯಿಂಗಾಜೆ, ಜಿ ಕೆ ಹಮೀದ್, ಸುಮತಿ ಶಕ್ತಿ ವೇಲು, ಎಸ್ ಕೆ ಹನೀಫ್, ದಿನಕರ ಸಣ್ಣಮಲೆ, ವಿಮಲಾ ಪ್ರಸಾದ್,ಎ ಬಿ ಅಬ್ಬಾಸ್ ಅಡ್ಕ, ಮಂಜುನಾಥ ಮಡ್ತಿಲ, ಧನುಷ್ ಕುಕ್ಕೆಟ್ಟಿ, ಪರಮೇಶ್ವರ ಕೆಂಬಾರೆ, ಪ್ರವೀಣ ರೈ ಮರುವಂಜ, ಸೇರಿ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಭಾಗವಹಿಸಿದ್ದರು.ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಕೆ.ಗೋಕುಲ್ ದಾಸ್ ಕಾರ್ಯಕ್ರಮ ನಿರೂಪಿಸಿದರು.