ಕೊಲ್ಲಮೊಗ್ರ: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟು 230 ಅರ್ಜಿಗಳನ್ನು
ವಿವಿಧ ಇಲಾಖೆಗಳಿಗೆ ಸಲ್ಲಿಸಲಾಗಿದೆ. ಕಂದಾಯ, ಅರಣ್ಯ, ಸ್ಥಳೀಯಾಡಳಿತ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟಂತೆ ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದ್ದಾರೆ. ಕಂದಾಯ ಇಲಾಖೆಗೆ ಸಂಬಂಧಿಸಿ ಅತೀ ಹೆಚ್ಚು ಅರ್ಜಿ ಬಂದಿದೆ. ಸುಮಾರು 80ಕ್ಕೂ ಹೆಚ್ಚು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿದೆ.
ಕಂದಾಯ ಭೂಮಿ ಸಮಸ್ಯೆ, ಭಾಗಷಃ ಅರಣ್ಯ ಸಮಸ್ಯೆ, ರಸ್ತೆ, ಸೇತುವೆಗಳ ನಿರ್ಮಾಣ, ಅಭಿವೃದ್ಧಿ ಸೇರಿದಂತೆ ಸಾರ್ವಜನಿಕ ಅಭಿವೃದ್ಧಿ ಮತ್ತಿತರ ಅರ್ಜಿಗಳನ್ನು ಸಲ್ಲಿಸಲಾಗಿದೆ. ಕೊಲ್ಲಮೊಗ್ರ, ಕಲ್ಮಕ್ಕಾರ್, ಹರಿಹರ, ಬಾಳುಗೋಡು ಗ್ರಾಮಸ್ಥರು ಅರ್ಜ ಸಲ್ಲಿಸಿದರು. ಲಾಖೆಗಳಿಗೆ ಸಲ್ಲಿಸಿದ ಅರ್ಜಿಯ ಪ್ರತಿಗಳನ್ನು ಪತ್ರಕರ್ತರ ಸಂಘಕ್ಕೂ ಸಲ್ಲಿಸಲಾಗಿದೆ. ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯ ಬಗ್ಗೆ ಪತ್ರಕರ್ತರ ಸಂಘದ ವತಿಯಿಂದಲೂ ಗಮನ ಹರಿಸಲಾಗುವುದು. ಗ್ರಾಮಗಳ ಅಭಿವೃದ್ಧಿಯ ಬಗ್ಗೆ ಮಾಧ್ಯಮಗಳು ಕೂಡ ವರದಿಗಳ ಮೂಲಕ ವಿಶೇಷ ಪ್ರಯತ್ನ ನಡೆಸಲಿವೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.