ಮಂಗಳೂರು: ನಾಮಪತ್ರಗಳ ಸಲ್ಲಿಕೆಯ ಅಂತಿಮ ದಿನವಾದ ಏ.4ರ ಗುರುವಾರ 17- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ, ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಆರ್. ಪದ್ಮರಾಜ್, ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಕಾಂತಪ್ಪ, ಪಕ್ಷೇತರ ಅಭ್ಯರ್ಥಿಗಳಾಗಿ
ಮ್ಯಾಕ್ಸಿಮ್ ಪಿಂಟೋ, ಪ್ರಾನ್ಸಿಸ್ ಲ್ಯಾನ್ಸಿ ಮಾಡ್ತಾ ಹಾಗೂ ಸತೀಶ್ ಬೂಡುಮಕ್ಕಿ ಅವರ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಕೆಯ ಅವಧಿ ಕೊನೆಗೊಂಡಾಗ ಒಟ್ಟು 11 ಅಭ್ಯರ್ಥಿಗಳು 21 ನಾಮಪತ್ರ ಸಲ್ಲಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ನಾಲ್ಕು ಉಮೇದುವಾರಿಕೆಗಳನ್ನು ಸಲ್ಲಿಸಿರುತ್ತಾರೆ. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.8 ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ಏ.26ರಂದು ದ.ಕ.ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.