ಸುಳ್ಯ: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡುವ ನಿಟ್ಟಿನಲ್ಲಿ ಪಂಚಾಯತ್ ಆಡಳಿತವನ್ನು ಜನಪರವಾಗಿ ಮುನ್ನಡೆಸಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ.
ಅವರು ಸುಳ್ಯ ನಗರ ಪಂಚಾಯತ್ನ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಎ.ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಬುದ್ಧ ನಾಯ್ಕ್ ಅವರನ್ನು
ಅಭಿನಂದಿಸಿ ಮಾತನಾಡಿದರು.ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ’ ಅತ್ಯುತ್ತಮ ಆಡಳಿತ ನಡೆಸುವ ಮೂಲಕ ಸುಳ್ಯ ನಗರ ಪಂಚಾಯತನ್ನು ಮಾದರಿ ಪಂಚಾಯತ್ ಆಗಿ ರೂಪಿಸಿ ಎಂದು ಹೇಳಿದರು.
ಮಾಜಿ ಸಚಿವ ಎಸ್.ಅಂಗಾರ,ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಪಂಚಾಯತ್ ಸದಸ್ಯರಾದ ಎಂ.ವೆಂಕಪ್ಪ ಗೌಡ, ವಿನಯಕುಮಾರ್ ಕಂದಡ್ಕ, ಎ.ವಿ.ತೀರ್ಥರಾಮ ಶುಭ ಹಾರೈಸಿದರು.
ನೂತನ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಮಾತನಾಡಿ’ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಜನರ ವಿಶ್ವಾಸಕ್ಕೆ ಚ್ಯುತಿ ಬರದ ರೀತಿಯಲ್ಲಿ ಆಡಳಿತ ನಡೆಸುವುದಾಗಿ ಹೇಳಿದರು. ಉಪಾಧ್ಯಕ್ಷ ಬುದ್ಧ ನಾಯ್ಕ ಮಾತನಾಡಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ತಹಶೀಲ್ದಾರ್ ಜಿ.ಮಂಜುನಾಥ್,ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್, ಬಿಜೆಪಿ ಪ್ರಮುಖರಾದ ಹರೀಶ್ ಕಂಜಿಪಿಲಿ, ಕಿಶೋರ್ ಕುಮಾರ್ ಬೊಟ್ಯಾಡಿ, ಆಶಾ ತಿಮ್ಮಪ್ಪ ಮತ್ತಿತರ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.