ಸುಳ್ಯ: ಸುಳ್ಯ ನಗರ ಪಂಚಾಯತ್ಗೆ ನೂತನ ಮುಖ್ಯಾಧಿಕಾರಿ ನೇಮಕ ಮಾಡಿ ಸರಕಾರ ಆದೇಶ ಮಾಡಿದೆ. ಚಾಮರಾಜನಗರ ನಗರ ಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಬಸವರಾಜು ಅವರನ್ನು ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾದ ಸುಧಾಕರ ಎಂ.ಎಚ್.ಅವರು ವರ್ಗಾವಣೆಯಾದ ಹಿನ್ನಲೆಯಲ್ಲಿ ಖಾಲಿ ಹುದ್ದೆಗೆ ಈ ನೇಮಕಾತಿ ನಡೆದಿದೆ. ಸುಧಾಕರ ಅವರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರ ಸಭೆಯ ಕಚೇರಿ ವ್ಯವಸ್ಥಾಪಕರಾಗಿ ವರ್ಗಾವಣೆಯಾಗಿದ್ದಾರೆ.














