ಸುಳ್ಯ: ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರ ಮಧ್ಯೆ ಹೊಯ್ ಕೈ, ತಳ್ಳಾಟ ನಡೆದ ಘಟನೆ ನಡೆದು ಸಭೆಗೆ ಅಡ್ಡಿಯಾಗಿ ಕೆಲ ಕಾಲ ಸಭೆ ಸ್ಥಗಿತಗೊಂಡ ಮತ್ತು ಬಳಿಕ ಪೊಲೀಸರು ಆಗಮಿಸಿ ಸದಸ್ಯರನ್ನು ಸಮಾಧಾನ ಪಡಿಸಿದ ಘಟನೆ ನಡೆದಿದೆ.
ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆಯಲ್ಲಿ ನ.2ರಂದು ನಡೆದ ಸಾಮಾನ್ಯ ಸಭೆಯಲ್ಲಿ ಇಂಜಿನಿಯರ್, ಆರೋಗ್ಯಾಧಿಕಾರಿ ಇಲ್ಲದೆ ಹಲವು ತಿಂಗಳಿನಿಂದ ನಗರ ಪಂಚಾಯತ್ನಲ್ಲಿ

ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಸಭೆಗೆ ಇಂಜಿನಿಯರ್, ಆರೋಗ್ಯಾಧಿಕಾರಿ ಕರೆಸಿ ಎಂದು ಒತ್ತಾಯಿಸಿ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ ವಿರೋಧ ಪಕ್ಷದವರು ಸಭೆಯ ಮುಂಭಾಗಕ್ಕೆ ಬಂದು ಟೇಬಲ್ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ನಗರ ಪಂಚಾಯತ್ ಆಡಳಿತದ ವಿರುದ್ಧ ಘೋಷಣೆ, ಧಿಕ್ಕಾರ ಕೂಗಿದರು.ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿ ಸಭೆಯ ಮುಂಭಾಗಕ್ಕೆ ಬಂದರು. ಈ ಸಂದರ್ಭದಲ್ಲಿ ಆಡಳಿತ
ಗದ್ದಲದ ಗೂಡಾದ ನಗರ ಪಂಚಾಯತ್ ಸಭೆ
The Sullia Mirror YouTube channel
ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷದ ಸದಸ್ಯರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆಯಿತು. ಪರಸ್ಪರ ವಾಗ್ವಾದ, ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಆಡಳಿತ, ವಿರೋಧ ಪಕ್ಷದ ಸದಸ್ಯರ ಮಧ್ಯೆ ಪರಸ್ಪರ ತಳ್ಳಾಟ, ಹೊಯ್ ಕೈ ನಡೆದು ಸಭೆ ವಿಕೋಪಕ್ಕೆ ತಲುಪಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಯಿತು. ಎಸ್ಐ ಜಿ.ಆರ್.ದಿಲೀಪ್ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಸದಸ್ಯರನ್ನು ಸಮಾಧಾನ ಪಡಿಸಿದ ಪೊಲೀಸ್ ಅಧಿಕಾರಿಗಳು ಹೊಯ್ ಕೈ, ತಳ್ಳಾಟ ನಡೆಸದಂತೆ ಸೂಚನೆ ನೀಡಿದರು.

ಬಳಿಕ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ವಿರೋಧ ಪಕ್ಷದ ಸದಸ್ಯರ ಜೊತೆ ಮಾತುಕತೆ ನಡೆಸಿದರು. ಮುಂದಿನ ಸಭೆಯ ಒಳಗೆ ಇಂಜಿನಿಯರ್, ಆರೋಗ್ಯಾಧಿಕಾರಿ ನೇಮಕ ಆಗಬೇಕು, ಸಭೆಗೆ ಇಂಜಿನಿಯರ್, ಆರೋಗ್ಯಾಧಿಕಾರಿ ಕರೆಸಬೇಕು ಎಂದು ವಿಪಕ್ಷ ಸದಸ್ಯರು ಒತ್ತಾಯಿಸಿದರು. ಮುಂದಿನ ಸಭೆಗೆ ಅಧಿಕಾರಿಗಳನ್ನು ಕರೆಸುತ್ತೇವೆ ಎಂದು ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹೇಳಿದರು. ಬಳಿಕ ಸಭೆ ಆರಂಭಗೊಂಡು ಮುಂದುವರಿಯಿತು.
