ಸುಳ್ಯ: ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಲಾಗಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅಧ್ಯಕ್ಷ, ಉಪಾಧ್ಯಕ್ಷರ ಆಡಳಿತ ಅವಧಿ ಮುಗಿದು ಸುಮಾರು
ಒಂದೂವರೆ ವರ್ಷಗಳ ಬಳಿಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ.20 ಸದಸ್ಯರ ನಗರ ಪಂಚಾಯತ್ನಲ್ಲಿ 14 ಮಂದಿ ಬಿಜೆಪಿ ಸದಸ್ಯರಿದ್ದಾರೆ. 9 ಮಂದಿ ಮಹಿಳಾ ಸದಸ್ಯರು ಇದ್ದಾರೆ. ಕಳೆದ ಬಾರಿ ಅಧ್ಯಕ್ಷತೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.