ಸುಳ್ಯ: ಸುಳ್ಯ ನಗರ ಪಂಚಾಯತ್ ಆಡಳಿತಾಧಿಕಾರಿಯಾಗಿ ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ಅವರು ನೇಮಕಗೊಂಡಿದ್ದಾರೆ.
ಸುಳ್ಯ ನಗರ ಪಂಚಾಯತ್ ಮೊದಲ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಮೇ.5 ರಂದು ಕೊನೆಗೊಂಡಿತ್ತು. ಈ ಹಿನ್ನಲೆಯಲ್ಲಿ ಆಡಳಿತಾಧಿಕಾರಿ ನೇಮಕ ಮಾಡಿ ಸರಕಾರ ಆದೇಶ ನೀಡಿದೆ.ಮುಂದಿನ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯನ್ನು ಸರಕಾರ ಪ್ರಕಟಿಸಲಿದೆ. ಆ ಬಳಿಕ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ. ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಆಗುವ ತನಕ ತಹಶಿಲ್ದಾರ್ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.