ಸುಳ್ಯ: ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ಎ.ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿ ಆಯ್ಕೆಯಾದ ಜಿ ಬುದ್ಧ ನಾಯ್ಕ್ ಜಿ. ಇಂದು ಅಧಿಕಾರ ಸ್ವೀಕಾರ ಮಾಡಿದರು. ನೂತನ ಅಧ್ಯಕ್ಷೆ
ಶಶಿಕಲಾ ನೀರಬಿದಿರೆಯವರು ಅಪರಾಹ್ನ 3.45 ಕ್ಕೆ ಹಾಗೂ ಉಪಾಧ್ಯಕ್ಷ ಬುದ್ಧ ನಾಯ್ಕ್ ಅವರು ಮಧ್ಯಾಹ್ನ 1.30ಕ್ಕೆ ಅಧಿಕಾರ ವಹಿಸಿಕೊಂಡರು.ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರುಗಳು, ನ.ಪಂ.ಸಿಬ್ಬಂದಿ ಗಳು , ಬಿ.ಜೆ.ಪಿ.ಮುಖಂಡರಗಳು ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ನಗರ ಮಹಾಶಕ್ತಿಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ, ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ, ಜಿನ್ನಪ್ಪ ಪೂಜಾರಿ ಮತ್ತಿತರರು ಇದ್ದರು