ಸುಳ್ಯ: ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆಯಾಗಿ ಆಯ್ಮೆಯಾದ ಎ.ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಜಿ.ಬುದ್ಧ ನಾಯ್ಕ್ ಅವರು ಸುಳ್ಯದ ಬಿಜೆಪಿ ಕಚೇರಿಗೆ ಹಾಗೂ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಂಬೆಟಡ್ಕದ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯರ
ಭಾವಚಿತ್ರಗಳಿಗೆ ಪುಷ್ಪಾರ್ಚನೆ ನಡೆಸಿ ಆಶೀರ್ವಾದ ಪಡೆದರು. ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸಿದರು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿಗಳಾದ ವಿನಯಕುಮಾರ್ ಕಂದಡ್ಕ ಪ್ರದೀಪ್ ರೈ ಮನವಳಿಕೆ, ಬಿಜೆಪಿ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ. ಪ್ರಧಾನ ಕಾರ್ಯದರ್ಶಿ ನಾರಾಯಣ ಶಾಂತಿನಗರ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಅಧ್ಯಕ್ಷೆ ಶಶಿಕಲಾ ಹಾಗೂ ಉಪಾಧ್ಯಕ್ಷರಾದ ಬುದ್ಧ ನಾಯ್ಕ್ ಅವರು ಚೆನ್ನಕೇಶವ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.