ಸುಳ್ಯ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕನಕಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ನಡೆದಿದೆ. ಇದರಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ
ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಅಲ್ಲದೆ ಮರ 33 ಕೆ.ವಿ ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಲೈನ್ಗೆ ಹಾನಿ ಸಂಭವಿಸಿದೆ. ವಿದ್ಯುತ್ ವ್ಯತ್ಯಯ ಉಂಟಾದ ಕಾರಣ ಸುಳ್ಯಕ್ಕೆ ಬೆಳ್ಳಾರೆಯಿಂದ ಭೂಗತ ಕೇಬಲ್ ಲೈನ್ ಮೂಲಕ ವಿದ್ಯುತ್ ಸರಬರಾಜು ಮಾಡಲಾಗುತಿದೆ ಎಂದು ತಿಳಿದು ಬಂದಿದೆ. ಸ್ಥಳೀಯರು ಕಾರ್ಯಾಚರಣೆ ನಡೆಸಿ ಮರ ತೆರವು ಮಾಡಲಾಯಿತು.















