ಸುಳ್ಯ: ಭಾರೀ ಮಳೆಗೆ ಹಳೆಗೇಟು – ಕೊಡಿಯಾಲಬೈಲು ರಸ್ತೆಯಲ್ಲಿ ಬ್ರಹ್ಮರಗಯ ಬಳಿ ಬೃಹತ್ ಮರ ರಸ್ತೆಗೆ ಅಡ್ಡವಾಗಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆಯಿತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ
ನಗರ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಸುದೇವ್ ಅವರು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಿ, ಸ್ಥಳೀಯರ ನೆರವಿನೊಂದಿಗೆ ಮರವನ್ನು ತೆರವುಗೊಳಿಸಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಯಿತು.ಅರಣ್ಯ ಇಲಾಖೆಯ ಗಸ್ತು ಅರಣ್ಯ ಪಾಲಕರಾದ ಪ್ರಕಾಶ್ ಕೆ, ಮತ್ತು ಮಂಜುನಾಥ್, ಶ್ರೀಧರ್ ಪರಿವಾರಕಾನ, ಲೂಸಿ , ಭವಾನಿಶಂಕರ್ ಮತ್ತು ಇತರ ಸ್ಥಳೀಯರು ಸಹಕರಿಸಿದರು.












