ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಲ್ಸೂರು ಸಮೀಪ ಮರ ಬಿದ್ದು ರಸ್ತೆ ತಡೆ ಉಂಟಾಗಿದೆ. ಇದರಿಂದ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಮರ 33 ಕೆವಿ ಲೈನ್ ಮೇಲೆ ಬಿದ್ದು ಸುಳ್ಯಕ್ಕೆ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ವಿದ್ಯುತ್ ಸಂಪರ್ಕ ಸರಿಪಡಿಸುವಾಗ ತಡವಾಗಬಹುದು ಎಂದು ಮೆಸ್ಕಾಂ ಇಂಜಿನಿಯರ್ಗಳು ತಿಳಿಸಿದ್ದಾರೆ. ಮರ ತೆರವು ಕಾರ್ಯಾಚರಣೆ ನಡೆಸಲಾಗುತಿದೆ ಎಂದು ತಿಳಿದು ಬಂದಿದೆ