ಬಂಟ್ವಾಳ: ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ವಿದ್ಯಾರ್ಥಿನಿ ಆರು ವರ್ಷದ ಬಾಲಕಿ ಮೃತಪಟ್ಟು,ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸಂಭವಿಸಿದೆ.ಬಂಟ್ವಾಳ ತಾಲೂಕಿನ ಬರೀಮಾರು ಕಲ್ಲೇಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ದುರಂತ ಸಂಭವಿಸಿದೆ.
ಸಂಜೆ ಸುಮಾರು 5 ಗಂಟೆ ವೇಳೆಗೆ ಕಲ್ಲಡ್ಕದ
ಖಾಸಗಿ ಶಾಲೆಯೊಂದರ ಬಸ್ ವಿದ್ಯಾರ್ಥಿಗಳನ್ನು ಮನೆಗಳಿಗೆ ಬಿಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್ ಮೇಲೆ ಏಕಾಏಕಿ ಬೃಹತ್ ಮರ ಬಿದ್ದ ಪರಿಣಾಮ ಬಸ್ನೊಳಗಿದ್ದ ಆರು ವರ್ಷದ ವಿದ್ಯಾರ್ಥಿನಿ ಮೃತಪಟ್ಟಿದ್ದು, ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯರು ಹಾಗೂ ಅಧಿಕಾರಿಗಳ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಪೊಲೀಸರು ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.ಬಸ್ ಮೇಲಿದ್ದ ಮರವನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಯಿತು.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.








