ಸುಳ್ಯ:ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸಚಿವ ಸಂಪುಟದ ಸಭೆಯಲ್ಲಿ ನಿರ್ಧರಿಸಿದ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.ಸುಳ್ಯ ಬಸ್ ನಿಲ್ದಾಣದ ಬಳಿ ನಡೆದ ಕಾರ್ಯಕ್ರಮದಲ್ಲಿ
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮಾತನಾಡಿ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ,ಕರ್ನಾಟಕ ರಾಜ್ಯ ಅರೆಬಾಷೆ ಅಕಾಡೆಮಿ ಸದಸ್ಯರಾದ ಡಾ.ಜ್ಞಾನೇಶ್,ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯ ನಂದರಾಜ್ ಸಂಕೇಶ್ ಮಾತನಾಡಿದರು.ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿ ಶಂಕರ್ ಕಲ್ಮಡ್ಕ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಯೂತ್ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ ವಂದಿಸಿದರು.ಈ ಸಂದರ್ಭದಲ್ಲಿ
ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಮುಖಂಡರಾದ ಅಧ್ಯಕ್ಷ ಜಿ ಕೆ ಹಮೀದ್, ದೀರಾ ಕ್ರಾಸ್ತಾ, ರಾಜು ಪಂಡಿತ್,ಎಸ್. ಕೆ. ಹನಿಫ್, ಜೂಲಿಯಾನ ಕ್ರಾಸ್ತಾ ಮತ್ತಿತರರು ಉಪಸ್ಥಿತರಿದ್ದರು.ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.








