ಸುಳ್ಯ:ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಕಚೇರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಭೇಟಿ ನೀಡಿದರು. ಸುಳ್ಯದ ಅಮರ ಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನಾಚರಣೆಯ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ
ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷ ಎಸ್. ಸಂಶುದ್ದೀನ್ ಸಚಿವರನ್ನು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು,ಸಂಘದ ಮಾಜಿ ಅಧ್ಯಕ್ಷರಾದ ಎನ್.ಎ. ರಾಮಚಂದ್ರ,ಪಿ.ಸಿ. ಜಯರಾಮ, ಕೆ. ಟಿ. ವಿಶ್ವನಾಥ್, ಶೈಲೇಶ್ ಅಂಬೆಕಲ್ಲು, ಸಂಘದ ಖಜಾಂಜಿ ಚಂದ್ರಶೇಖರ ನಂಜೆ, ಕೆವಿಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾoಶುಪಾಲ ಡಾ.ಡಿ.ವಿ.ಲೀಲಾಧರ್, ತಹಶೀಲ್ದಾರ್ ಮಂಜುಳಾ ಮೊದಲಾದವರು ಉಪಸ್ಥಿತರಿದ್ದರು








