ಮಂಗಳೂರು: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ದ.ಕ. ಜಿಲ್ಲಾಡಳಿತದ ಆಶ್ರಯದಲ್ಲಿ ಸೋಮವಾರ ಬೃಹತ್ ಉದ್ಯೋಗ ಮೇಳ ನಗರದ ಅಲೋಸಿಯಸ್ ಕಾಲೇಜು ಆವರಣದಲ್ಲಿ ನಡೆಯಲಿದೆ.ಉದ್ಯೋಗ ಮೇಳಕ್ಕೆ
448ಕ್ಕೂ ಅಧಿಕ ಕಂಪನಿಗಳು ಹಾಗೂ 16631 ಅಭ್ಯರ್ಥಿಗಳು ಆನ್ಲೈನ್ನಲ್ಲಿ ನೋಂದಾಯಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಯುವ ಅಭ್ಯರ್ಥಿಗಳು ಉದ್ಯೋಗಕ್ಕಾಗಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಿಂದ 7477 ಹಾಗೂ ಉಡುಪಿ ಜಿಲ್ಲೆಯಿಂದ 1791 ಅಭ್ಯರ್ಥಿಗಳು ನೋಂದಣಿ ಮಾಡಿದ್ದಾರೆ. ಯುವಜನತೆಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಈ ಮೇಳ ಉದ್ದೇಶವಾಗಿದೆ.ಕಂಪನಿಗಳು ಸ್ಥಳದಲ್ಲೇ ಪ್ರಾಥಮಿಕ ಸಂದರ್ಶನ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಹೊಸದಾಗಿ ಪದವಿ ಪಡೆದವರು ಹಾಗೂ ಅನುಭವಿ ಅಭ್ಯರ್ಥಿಗಳಿಬ್ಬರೂ ಒಂದೇ ಸೂರಿನಡಿ ಕಂಪನಿಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.ತಾಂತ್ರಿಕ ಕೌಶಲ್ಯಗಳ ಅನುಗುಣವಾಗಿ ತರಬೇತಿ ಅಥವಾ ಕೋರ್ಸ್ಗಳನ್ನು ಆಯ್ಕೆ ಮಾಡಲು ಈ ಮೇಳ ಸಹಕಾರಿಯಾಗಲಿದೆ.ನಗರದ ಪ್ರಮುಖ ಕೇಂದ್ರಗಳಿಂದ
ಉದ್ಯೋಗ ಮೇಳ ನಡೆಯುವ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಆವರಣದವರೆಗೆ ಸೋಮವಾರ ಕೆ ಎಸ್ ಆರ್ ಟಿ ಸಿ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳಿಗೆ ಮತ್ತು ಉದ್ಯೋಗದಾತರಿಗೆ ಉಚಿತ ಊಟ, ಕುಡಿಯುವ ನೀರು ಹಾಗೂ ಶೌಚಾಲಯ ಹಾಗೂ ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರು ಭಾನುವಾರ ಹಿರಿಯ ಅಧಿಕಾರಿಗಳೊಂದಿಗೆ ಅಂತಿಮ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದರು.
ಮೇಳ ನಡೆಯಲಿರುವ ಸಂತ ಅಲೋಶಿಯಸ್ ಕಾಲೇಜು ಆವರಣದಲ್ಲಿ ಅಭ್ಯರ್ಥಿಗಳು ಮತ್ತು ಉದ್ಯೋಗದಾತರ ಅನುಕೂಲಕ್ಕಾಗಿ ವಿಶೇಷ ಕೌಂಟರ್ಗಳನ್ನು ಸ್ಥಾಪಿಸಲಾಗಿದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್ ಸೇರಿದಂತೆ ವಿವಿಧ ಶೈಕ್ಷಣಿಕ ಅರ್ಹತೆ ಹೊಂದಿರುವ ಹೊಸಬರು ಮತ್ತು ಅನುಭವಿ ಅಭ್ಯರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.

















