ಸುಳ್ಯ: ಮಾಣಿ ದಾರುಲ್ಇರ್ಷಾದ್ ಸಾರಥಿ, ಉಡುಪಿ ಮತ್ತು ಚಿಕ್ಕಮಗಳೂರು ಖಾಝಿ ಶೈಖುನಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮುಚ್ಚoಪಾಡಿ ವಿವಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸುಳ್ಯಕ್ಕೆ ಭೇಟಿ ನೀಡಿದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಉದ್ಯಮಿ ಹಾಜಿ
ಅಬ್ದುಲ್ ಮಜೀದ್ ಜನತಾ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ ರಾಜ್ಯ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಅನ್ಸಾರಿಯಾ ಅನಾಥ ಮತ್ತು ನಿರ್ಗತಿಕ ಮಕ್ಕಳ ಕೇಂದ್ರ ಅಧ್ಯಕ್ಷ ಅಬ್ದುಲ್ ಮಜೀದ್, ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಖಜಾಂಚಿ ಹಾಜಿ ಎಸ್. ಎಂ. ಅಬ್ದುಲ್ ಹಮೀದ್, ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ನಗರ ಪಂಚಾಯತ್ ಸದಸ್ಯ ರಿಯಾಜ್ ಕಟ್ಟೆಕ್ಕಾರ್ಸ್ ಉಪಸ್ಥಿತರಿದ್ದರು