ಪೆರುವಾಜೆ:ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಎರಡನೆ ದಿನ ವಿವಿಧ ಧಾರ್ಮಿಕ ಈ ಕಾರ್ಯಕ್ರಮ ನೆರವೇರಿತು.ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ, ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಅವರ ನೇತೃತ್ವದಲ್ಲಿ ಉಗ್ರಾಣ ಮುಹೂರ್ತ ನೆರವೇರಿತು. ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಬೆಳಗಿಸಿದರು. ಆ ಬಳಿಕ
ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.ಈ ಸಂದರ್ಭದಲ್ಲಿ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ

ಪಿ. ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ, ದಾಮೋದರ ನಾಯ್ಕ, ನಾರಾಯಣ ಕೊಂಡೆಪ್ಪಾಡಿ, ಜಗನ್ನಾಥ ರೈ, ಭಾಗ್ಯಲಕ್ಷ್ಮಿ, ಯಶೋದ ಎ,ಎಸ್., ಜಿ.ಪಂ.ಮಾಜಿ ಸದಸ್ಯೆ ರಾಜೀವಿ ಆರ್ ರೈ, ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಕ್ಷೇತ್ರದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಮಾಜಿ ಸದಸ್ಯರಾದ ಮಂಜಪ್ಪ ರೈ ಬೆಳ್ಳಾರೆ, ಭೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ಉಮೇಶ್ ಕೊಟ್ಟೆಕಾಯಿ, ಸುಬ್ರಾಯ ಭಟ್ ನೀರ್ಕಜೆ, ದೇವದಾಸ ಶೆಟ್ಟಿ, ಉಮೇಶ್ ರಾವ್ ಕೊಂಡೆಪ್ಪಾಡಿ, ಕ್ಷೇತ್ರದ ಕಚೇರಿ ವ್ಯವಸ್ಥಾಪಕ ವಸಂತ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.









