ಕೋಲ್ಕತ್ತ: ದೇಶದ ಮೊದಲ ಜಲ ಸುರಂಗದ ಮೆಟ್ರೊ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಚಾಲನೆ ನೀಡಿದರು. ಜಲ ಸುರಂಗದಲ್ಲಿ ಶಾಲಾ ವಿದ್ಯಾರ್ಥಿಗಳ ಜೊತೆ ಪ್ರಯಾಣಿಸುವ ಮೂಲಕ ಪ್ರಧಾನಿ ಮೋದಿ ಅವರು ನೂತನ ಮೆಟ್ರೊ ಯೋಜನೆಯನ್ನು ಲೋಕಾರ್ಪಣೆ ಮಾಡಿದರು.ಇಲ್ಲಿನ ಹೂಗ್ಲಿ ನದಿಯೊಳಗಿನ ಸುರಂಗ ಮಾರ್ಗದ ಮೂಲಕ ಹೌರಾ ಮತ್ತು ಎಸ್ಪ್ಲೇನೇಡ್ ನಡುವೆ ಮೆಟ್ರೊ ರೈಲು ಸಂಚರಿಸಲಿದೆ. ಕೋಲ್ಕತ್ತ ಮೆಟ್ರೊದ ಪೂರ್ವ-ಪಶ್ಚಿಮ ಕಾರಿಡಾರ್ ವ್ಯಾಪ್ತಿಯ ಈ ಯೋಜನೆಗೆ
ಈ ಸುರಂಗದ ಉದ್ದ 520 ಮೀಟರ್ ಆಗಿದೆ. ನೀರಿನೊಳಗೆ ಮೆಟ್ರೊ ರೈಲಿನ ಸರಾಸರಿ ಪ್ರಯಾಣದ ಅವಧಿ 45 ಸೆಕೆಂಡುಗಳು. ರೈಲುಗಳು ಸುರಂಗದಲ್ಲಿ ಗಂಟೆಗೆ 80 ಕಿ.ಮೀ ವೇಗದಲ್ಲಿ ಚಲಿಸಬಹುದು ಎಂದು ಮೆಟ್ರೊ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಪೂರ್ವ ಪಶ್ಚಿಮ ಮೆಟ್ರೊ ಕಾರಿಡಾರ್ನ ಭಾಗವಾಗಿ ಪಶ್ಚಿಮ ಬಂಗಾಳದ ಹೂಗ್ಲಿ ನದಿಯ ಅಡಿಯಲ್ಲಿ ಭಾರತದ ಮೊದಲ ನೀರೊಳಗಿನ ಸುರಂಗ ಮಾರ್ಗವನ್ನು ನಿರ್ಮಿಸಲಾಗಿದೆ. ನೀರೊಳಗಿನ 520 ಮೀಟರ್ ಉದ್ಧದ ಈ ಮಾರ್ಗವನ್ನು ಪ್ರಯಾಣಿಕರು ಕಣ್ಣುರೆಪ್ಪೆ ಮುಚ್ಚಿ ತೆಗೆಯುವುದರೊಳಗೆ ಅಂದರೆ ಕೇವಲ 45 ಸೆಕೆಂಡುಗಳಲ್ಲಿ ಮೆಟ್ರೊ ರೈಲು ದಾಟಿ ಹೋಗಲಿದೆ. ಯುರೋಸ್ಟಾರ್ನ ಲಂಡನ್-ಪ್ಯಾರಿಸ್ ಕಾರಿಡಾರ್ನ ರೀತಿಯೇ ಭಾರತದ ಈ ಸುರಂಗ ಮಾರ್ಗವು ನದಿಪಾತ್ರದಿಂದ 16 ಮೀಟರ್ ಕೆಳಗೆ ಮತ್ತು ನೆಲದ ಮಟ್ಟದಿಂದ 33 ಮೀಟರ್ ಕೆಳಗೆ ನಿರ್ಮಾಣವಾಗಿದೆ. ಕೋಲ್ಕತ್ತದ ಪೂರ್ವದಲ್ಲಿ ಸಾಲ್ಟ್ ಲೇಕ್ ಸೆಕ್ಟರ್ನ ಐಟಿ ತಾಣದಿಂದ ಪಶ್ಚಿಮದಲ್ಲಿ ಹೌರಾ ಮೈದಾನದವರೆಗೆ 520 ಮೀಟರ್ ಉದ್ದದ ಸುರಂಗವು ನದಿಗೆ ಅಡ್ಡಲಾಗಿ ಹಾದುಹೋಗಿದೆ.ಪೂರ್ವ ಪಶ್ಚಿಮ ಕಾರಿಡಾರ್ಗೆ ಈ ಸುರಂಗವು ಅತ್ಯಗತ್ಯ ಮತ್ತು ಪ್ರಮುಖವಾದುದು. ಹೌರಾ ಮತ್ತು ಸೀಲ್ದಾ ನಡುವಿನ ಈ ಮೆಟ್ರೊ ಮಾರ್ಗವು ರಸ್ತೆಯ ಮೂಲಕ ಸಂಚರಿಸಬೇಕಿದ್ದ ಒಂದೂವರೆ ಗಂಟೆಗಳ ಪ್ರಯಾಣದ ಸಮಯವನ್ನು 40 ನಿಮಿಷಗಳಿಗೆ ಇಳಿಸಿದೆ. ಇದು ಎರಡೂ ಕಡೆಗಳಲ್ಲಿ ದಟ್ಟಣೆಯನ್ನು ಸಹ ತಗ್ಗಿಸಲಿದೆ’ ಎಂದು ಕೋಲ್ಕತ್ತ ಮೆಟ್ರೊ ರೈಲು ನಿಗಮದ ಅಧಿಕಾರಿಗಳು ಹೇಳಿದ್ದಾರೆ.













