ನವದೆಹಲಿ: ಸಂಸತ್ತಿನಲ್ಲಿ ಇಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ‘ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ’ ಅನ್ನು ಘೋಷಿಸಿದ್ದಾರೆ.
ಈ ಯೋಜನೆ ಮೂಲಕ 1.7 ಕೋಟಿ ಕೃಷಿಕರಿಗೆ ಪ್ರಯೋಜನವಾಗಲಿದೆ. ಕಡಿಮೆ ಇಳುವರಿಯ 100 ಜಿಲ್ಲೆಗಳು ಇದರಲ್ಲಿ ಒಳಗೊಂಡಿರಲಿವೆ ಎಂದು ಅವರು ತಿಳಿಸಿದ್ದಾರೆ.ದಾಖಲೆಯ ಸತತ 8ನೇ ಬಜೆಟ್ ಮಂಡಿಸಿರುವ
ನಿರ್ಮಲಾ, ಕೃಷಿ ಕ್ಷೇತ್ರದ ಆಧುನೀಕರಣ ಹಾಗೂ ಸ್ವಾವಲಂಬನೆಯತ್ತ ಗಮನ ಕೇಂದ್ರಿಕರಿಸಲಾಗಿದೆ ಎಂದು ತಿಳಿಸಿದ್ದಾರೆ.ಯುವಜನತೆ, ಮಹಿಳೆ ಮತ್ತು ರೈತರನ್ನು ಕೇಂದ್ರೀಕರಿಸುವ ಗ್ರಾಮೀಣ ಸಮೃದ್ಧಿ ಯೋಜನೆಯನ್ನು ಸರ್ಕಾರ ಆರಂಭಿಸುತ್ತದೆ ಎಂದು ಅವರು ಹೇಳಿದ್ದಾರೆ.
ದ್ವಿದಳ ಧಾನ್ಯಗಳ ಆತ್ಮ ನಿರ್ಭರ ಭಾರತಕ್ಕಾಗಿ ಆರು ವರ್ಷಗಳ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಹೇಳಿದ್ದಾರೆ.
ತರಕಾರಿ, ಹಣ್ಣುಗಳ ಉತ್ಪಾದನೆ ಮತ್ತು ಲಾಭದಾಯಕ ಬೆಲೆ ಒದಗಿಸುವ ಸಮಗ್ರ ಕಾರ್ಯಕ್ರಮವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.
ರಾಜ್ಯಗಳಿಗೆ 50 ವರ್ಷಗಳ ಅವಧಿಗೆ ಬಡ್ಡಿ ರಹಿತವಾಗಿ 1.5 ಲಕ್ಷ ಕೋಟಿ ನೆರವನ್ನು ಮೂಲಸೌಕರ್ಯ ಅಭಿವೃದ್ಧಿಗೆ ನೀಡುವುದಾಗಿ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ನಲ್ಲಿ ಘೋಷಿಸಿದ್ದಾರೆ. 2021ರಲ್ಲಿ ಈ ಯೋಜನೆಯನ್ನು ಮೊದಲ ಬಾರಿಗೆ ಜಾರಿಗೆ ತರಲಾಗಿತ್ತು. ಅದರ ಯಶಸ್ಸಿನ ಆಧಾರದ ಮೇಲೆ 2ನೇ ಯೋಜನೆಯನ್ನು 2025–30ಕ್ಕೆ ವಿಸ್ತರಿಸಲಾಗಿದೆ. ಹೊಸ ಯೋಜನೆಗಳಿಗಾಗಿ10 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದಿದ್ದಾರೆ.
12 ಲಕ್ಷದವರೆಗೂ ಆದಾಯ ತೆರಿಗೆ ಇಲ್ಲ, 4ಲಕ್ಷ ತೆರಿಗೆ ಇಲ್ಲ, 4ಲಕ್ಷದಿಂದ 8ಲಕ್ಷವರೆಗೆ ಶೇ4;8ಲಕ್ಷದಿಂದ 11ಲಕ್ಷ– ಶೇ 10;12ಲಕ್ಷದಿಂದ
15ಲಕ್ಷ– ಶೇ 15; 16 ಲಕ್ಷದಿಂದ 20 ಲಕ್ಷವರೆಗೆ ಶೇ 20; 21ಲಕ್ಷದಿಂದ 24ಲಕ್ಷವರೆಗೆ ಶೇ 25ರಷ್ಟು ತೆರಿಗೆ.
ಹಿರಿಯ ನಾಯಕರಿಗೆ 1ಲಕ್ಷ ವರೆಗೆ ಟಿಡಿಎಸ್ ವಿನಾಯಿತಿ. ಆದಾಯಮೂಲದಿಂದ ತೆರಿಗೆ ಸಂಗ್ರಹ 7 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ.
ಹೊಸ ಆದಾಯ ತೆರಿಗೆ ಮಸೂದೆಯು ಮಂಡನೆ ಮಾಡಲಾಗುವುದು. ಇದರಿಂದ ತೆರಿಗೆದಾರರಿಗೆ ಹೆಚ್ಚು ಪ್ರಯೋಜನವಾಗಲಿದೆ. ಶಿಕ್ಷಣ ಕುರಿತ ಪಾವತಿಗೆ ಟಿಡಿಎಸ್ ಕಡಿತ ಇಲ್ಲ.
ಸಮುದ್ರ ಉತ್ಪನ್ನಗಳನ್ನು ಉತ್ತೇಜಿಸಲು ಅಬಕಾರಿ ಸುಂಕವನ್ನು ಶೇ 30ರಿಂದ ಶೇ 5ಕ್ಕೆ ಇಳಿಕೆ
ಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದ 36 ಔಷಧಗಳಿಗೆ ಆಮದು ಮೇಲಿನ ಅಬಕಾರಿ ಸಂಕದಿಂದ ರಿಯಾಯಿತಿ.
ಎಲ್ಲಾ ಸರ್ಕಾರಿ ಶಾಲೆಗಳಿಗೂ ಬ್ರಾಂಡ್ಬ್ಯಾಂಡ್ ಸಂಪರ್ಕ; ಜಲಜೀವನ ಮಿಷನ್ ಯೋಜನೆ ಇನ್ನಷ್ಟು ವಿಸ್ತರಣೆ
ವಿಮಾ ಕ್ಷೇತ್ರದಲ್ಲಿ ಶೇ 100ರಷ್ಟು ವಿದೇಶಿ ಹೂಡಿಕೆಗೆ ಅವಕಾಶ. ಸಾರ್ವಜನಿಕ ಬ್ಯಾಂಕ್ಗಳ ಮೂಲಕ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಸೌಲಭ್ಯಗಳ ವಿಸ್ತರಣೆ.
ಜೀನ್ ಬ್ಯಾಂಕ್ ಸ್ಥಾಪನೆಗೆ ಒತ್ತು. ಆ ಮೂಲಕ ಅನುವಂಶೀಯ ಕಾಯಿಲೆಗಳ ಸಂಶೋಧನೆ ಸಾಧ್ಯ. ಐಐಟಿ, ಐಐಎಸ್ಸಿಯಲ್ಲಿ ಹೆಚ್ಚುವರಿ ಸಂಶೋಧನೆಗೆ ಅನುದಾನ. ಭಾರತೀಯ ಜ್ಞಾನ ಸಂಪತ್ತಿನ ಬ್ಯಾಂಕ್ ಸ್ಥಾಪನೆಗೆ ಕ್ರಮ.
ಪ್ರವಾಸೋಧ್ಯಮಕ್ಕೆ ಒತ್ತು– ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ 50 ಪ್ರವಾಸಿ ತಾಣಗಳ ಉತ್ತೇಜನ. ಹೋಟೆಲ್ ನಿರ್ಮಾಣ ಹಾಗೂ ಇತರ ಮೂಲಸೌಕರ್ಯಕ್ಕೆ ಒತ್ತು; ಮುದ್ರಾ ಯೋಜನೆ ಮೂಲಕವೂ ಪ್ರವಾಸಿ ತಾಣಗಳ ಅಭಿವೃದ್ಧಿ. ವೈದ್ಯಕೀಯ ಪ್ರವಾಸೋದ್ಯಮಕ್ಕೆ ಖಾಸಗಿ ಪಾಲುದಾರಿಕೆ. ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒತ್ತು; ಮುಂದಿನ ಹತ್ತು ವರ್ಷಗಳಲ್ಲಿ ಈಗಿರುವುದಕ್ಕಿಂತ 4 ಕೋಟಿ ಹೆಚ್ಚುವರಿ ಪ್ರಯಾಣಿಕರ ಗುರಿ
ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ 1ಲಕ್ಷ ಕೋಟಿ ಮೀಸಲಿಡಲಾಗುವುದು. ಇದು ಕುಡಿಯುವ ನೀರು, ನೈರ್ಮಲ್ಯಕ್ಕೆ ಒತ್ತು ನೀಡಲು ವಿನಿಯೋಗಿಸಲಾಗುವುದು.
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಮೂರು ನಾವಿನ್ಯತೆ ಸಂಸ್ಥೆಗಳ ಸ್ಥಾಪನೆ 23 ಐಐಟಿಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಿಸಲಾಗಿದೆ. 60 ಸಾವಿರದಿಂದ 1.35 ಲಕ್ಷಕ್ಕೆ ಹೆಚ್ಚಳ. ಪಟ್ನಾ ಐಐಟಿ ವಿಸ್ತರಣೆ. ವೈದ್ಯಕೀಯ ಕಾಲೇಜುಗಳ ಸೀಟುಗಳನ್ನು 10 ವರ್ಷಗಳಲ್ಲಿ ಶೇ 100ರಷ್ಟು ಹೆಚ್ಚಳ ಮಾಡಲಾಗುವುದು
ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಾಷ್ಟ್ರೀಯ ತಯಾರಿಕಾ ವಲಯವನ್ನು ರಚಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಇದನ್ನು ಜಾರಿಗೊಳಿಸಲಾಗುವುದು. ಸೌರ, ಇವಿ ಬ್ಯಾಟರಿ, ಮೋಟಾರ್ಗಳು ಸೇರಿದಂತೆ ವಿವಿಧ ಉತ್ಪನ್ನಗಳ ತಯಾರಿಕೆ ಹಾಗೂ ಹೂಡಿಕೆಯನ್ನು ಉತ್ತೇಜಿಸಲಾಗುವುದು.
ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆ ಜಾರಿಗೊಳಿಸಲಾಗುವುದು. 22 ಲಕ್ಷ ಉದ್ದಿಮೆದಾರರಿಗೆ ಅನುಕೂಲವಾಗಲಿದೆ.
ದೇಶದಲ್ಲಿ ನವೋದ್ಯಮಗಳ ಬೆಳವಣಿಗೆಯನ್ನು ಉತ್ತೇಜಿಸಲು ಮತ್ತೊಂದು ಕಂತಿನ 10 ಸಾವಿರ ಕೋಟಿ ನಿಧಿಗಳ ಸಂಚಯ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.