ಧರ್ಮಸ್ಥಳ:ಕೇಂದ್ರ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಸಕುಟುಂಬಿಕರಾಗಿ ಸೋಮವಾರ ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು.ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ಪೂರ್ಣ ಕುಂಭದೊಂದಿಗೆ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಬಳಿಕ ಅವರು
ದೇವರ ದರ್ಶನ ಪಡೆದರು.ಸಚಿವರ ಪತ್ನಿ ಅನಿತಾಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸೊಸೆ ರೇವತಿ ನಿಖಿಲ್ ಕುಮಾರಸ್ವಾಮಿ ಜೊತೆಗಿದ್ದರು.ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇ ಗೌಡ ಉಪಸ್ಥಿತರಿದ್ದರು. ಧರ್ಮಸ್ಥಳ ಅತಿಥಿ ಗೃಹದಲ್ಲಿ ತಂಗಿದ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಕಟುಂಬದವರು ಮಂಗಳವಾರ ಸುಬ್ರಹ್ಮಣ್ಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.















