ಸುಳ್ಯ: ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಸೆ. 11ರಂದು ಯುಪಿಎಸ್ಸಿ(UPSC) ಮತ್ತು ಐಬಿಪಿಎಸ್ (IBPS) ಬಗ್ಗೆ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಡೈರೆಕ್ಟರ್,ಸರ್ವಜ್ಞ ಅಕಾಡೆಮಿಯ ಸುರೇಶ್ ಉಪಸ್ಥಿತರಿದ್ದರು.ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ
ನಿರಂತರ ಪ್ರಯತ್ನ ಅತ್ಯಗತ್ಯ, ಅವಕಾಶಗಳ ಸದುಪಯೋಗ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ಇತ್ತರು.
ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯದ ನಿರ್ದಾರಕ್ಕೆ ಇಂತಹ ಕಾರ್ಯಕ್ರಮ ಅತ್ಯವಶ್ಯಕ ಎಂದರು.
ಸುರೇಶ್ ಅವರು ಸಂಪೂರ್ಣ UPSC, IBPS ಹಾಗೂ ಎಲ್ಲಾ ತರಹದ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವಿದ್ಯಾರ್ಥಿಗಳಾದ ಪ್ರತಿಜ್ಞಾ ಬಿ ಎಂ ಕಾರ್ಯಕ್ರಮ ನಿರೂಪಿಸಿದರು, ನಿತಿನ್ ಥೋಮಸ್ ಸ್ವಾಗತಿಸಿ, ಸಾನಿಕ ರೈ ವಂದಿಸಿದರು. ಶ್ರೇಯಸ್ ಕುಕ್ಕಾಜೆ ಅತಿಥಿ ಪರಿಚಯ ಮಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್,ಅಕಾಡೆಮಿಕ್ ಕೋ ಒರ್ಡಿನೆಟರ್ ಭವ್ಯ ಸಿ ಟಿ,ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.