ಊರುಬೈಲ್:ಚೆಂಬು ಗ್ರಾಮದ ಊರುಬೈಲ್ನಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕಳೆದ ಕೆಲವು ದಿನಗಳಿಂದ ಆನೆಗಳ ಹಿಂಡು ನಿರಂತರವಾಗಿ ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು
ನಾಶಪಡಿಸುತ್ತಿದೆ. ಇದರ ಪರಿಣಾಮವಾಗಿ ರೈತರು ಅಪಾರ ಪ್ರಮಾಣದ ಆರ್ಥಿಕ ನಷ್ಟ ಅನುಭವಿಸುತ್ತಿದ್ದು, ಹಾಡಹಗಲೇ ಕಾಣಿಸಿಕೊಳ್ಳುವ ಆನೆಗಳ ಹಿಂಡು ಕೃಷಿ ಹಾನಿ ಮಾಡುತಿದೆ ಎಂದು ಕೃಷಿಕರು ಹೇಳುತ್ತಾರೆ. 9 ಆನೆಗಳ ಹಿಂಡು ಒಂದು ವಾರದಿಂದ ಕೃಷಿ ತೋಟಕ್ಕೆ ದಾಳಿ ನಡೆಸಿ ಅಪಾರ ಹಾನಿ ಮಾಡಿದೆ. ಮಡಿಕೇರಿಯಿಂದ ಆಗಮಿಸಿದ ಅರಣ್ಯ ಇಲಾಖೆಯ ಆನೆ ಕಾರ್ಯಪಡೆ ತಂಡ ಮತ್ತು ಅರಣ್ಯ ಇಲಾಖೆಯ ತಂಡ ಪಟಾಕಿ ಸಿಡಿಸಿ ಆನೆಗಳನ್ನು ಕಾಡಿಗೆ ಅಟ್ಟಿದ್ದಾರೆ.







