ವಾಷಿಂಗ್ಟನ್: ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್, ಮುಂಬರುವ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಜೋ ಬೈಡನ್ ಕಣದಿಂದ ಹಿಂದೆ ಸರಿಯುತ್ತಿದ್ದಂತೆ ಉಪಾಧ್ಯಕ್ಷೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರನ್ನು ಡೆಮಾಕ್ರೆಟ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಎಂದು ಬೈಡೆನ್ ಶಿಫಾರಸ್ಸು ಮಾಡಿದ್ದಾರೆ.ಈ ಕುರಿತು
ಬೈಡೆನ್ ಅವರು ಎಕ್ಸ್ ನಲ್ಲಿ ತನ್ನ ಅನಿಸಿಕೆಗಳನ್ನು ಹಂಚಿಕೊಂಡಿದ್ದು ದೇಶದ ಹಿತಾಸಕ್ತಿಗಾಗಿ ಮುಂಬರುವ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ ಜೊತೆಗೆ ಮುಂದಿನ ಅಭ್ಯರ್ಥಿಯಾಗಿ ಪಕ್ಷದ ಹಾಲಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್ ಅವರನ್ನು ಆಯ್ಕೆ ಮಾಡಿರುವುದಾಗಿ ಪೋಸ್ಟ್ ಮಾಡಿದ್ದಾರೆ,
ಅಧ್ಯಕ್ಷೀಯ ರೇಸ್ ನಲ್ಲಿರುವ ಕಮಲಾ ಹ್ಯಾರಿಸ್ ಕೂಡ ಬೈಡೆನ್ ಅವರ ಹೇಳಿಕೆ ಪ್ರತಿಕ್ರಿಯೆ ನೀಡಿದ್ದು, ‘ಅಧ್ಯಕ್ಷರ ಅನುಮೋದನೆಯನ್ನು ಸ್ವೀಕರಿಸಲು ನನಗೆ ಗೌರವವಿದೆ ಅಲ್ಲದೆ ಡೆಮಾಕ್ರಟಿಕ್ ಪಕ್ಷವನ್ನು ಕಾರ್ಯರೂಪಕ್ಕೆ ತರಲು ನನ್ನ ಕೈಯಿಂದ ಆಗುವ ಪ್ರಯತ್ನ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಕಮಲಾ ಹ್ಯಾರೀಸ್ ಅವರನ್ನು ಡೆಮಾಕ್ರಟಿಕ್ ಅಭ್ಯರ್ಥಿಯಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತಿದೆ.