ಸುಳ್ಯ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ನಾಳೆ(ಆ.6)ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. ಸಚಿವರ ನೇತೃತ್ವದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗೃತಾ ಸಭೆ ನಡೆಯಲಿದೆ.ಬೆಳಗ್ಗೆ 9 ಗಂಟೆಗೆ
ಸುಳ್ಯಕ್ಕೆ ಆಗಮಿಸುವ ಅವರು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ 10 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ
ಸಚಿವರ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಪ್ರಾಕೃತಿಕ ವಿಕೋಪ ಮುಂಜಾಗ್ರತ ಕ್ರಮ, ಪೂರ್ವಭಾವಿ ಸಿದ್ಧತೆ ಹಾಗೂ ಮಾನ್ಸೂನ್ ಪರಿಸ್ಥಿತಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಾಲೂಕು ಕಚೇರಿ ಪ್ರಕಟಣೆ ತಿಳಿಸಿದೆ.












