ತಿರುವನಂತಪುರ:ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರು ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ಮುಖ್ಯಮಂತ್ರಿಯ ಜೊತೆಗೆ ನೂತನ ಸಚಿವ ಸಂಪುಟದ 20 ಸಚಿವರು ಪ್ರಮಾಣವಚನ ಸ್ವೀಕರಿಸಿದರುರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಪ್ರಮಾಣವಚನ ಬೋಧಿಸಿದರು. ನೂತನ ಸಚಿವರಾಗಿ
ರಮೇಶ್ ಚೆನ್ನಿತ್ತಲ, ಪಿ.ಕೆ. ಕುಂಞಾಲಿಕುಟ್ಟಿ, ಸನ್ನಿ ಜೋಸೆಫ್, ಕೆ. ಮುರಳೀಧರನ್, ಮೋನ್ಸ್ ಜೋಸೆಫ್, ಶಿಬು ಬೇಬಿ ಜಾನ್, ಅನೂಪ್ ಜೇಕಬ್, ಸಿ.ಪಿ. ಜಾನ್, ಎ.ಪಿ. ಅನಿಲ್ ಕುಮಾರ್, ಎನ್. ಶಂಸುದ್ದೀನ್, ಪಿ.ಸಿ. ವಿಷ್ಣುನಾಥ್, ರೋಜಿ ಎಂ. ಜಾನ್, ಬಿಂದು ಕೃಷ್ಣ, ಎಂ.ಲಿಜು, ಟಿ. ಸಿದ್ದೀಖ್, ಕೆ.ಎಂ. ಶಾಜಿ, ಪಿ.ಕೆ. ಬಷೀರ್, ವಿ.ಇ. ಅಬ್ದುಲ್ ಗಫೂರ್, ಕೆ.ಎ. ತುಳಸಿ, ಒ.ಜೆ. ಜನೀಶ್ ಪ್ರಮಾವಚನ ಸ್ವೀಕರಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಾಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಯಾಂಕಾ ಗಾಂಧಿ, ಕೇರಳದ ನಿರ್ಗಮನ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೆಲಂಗಾನ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಎಂ.ವಿ.ಗೋವಿಂದನ್ ಸೇರಿದಂತೆ ಪ್ರಮುಖ ಮುಖಂಡರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.














