ಕೊಲ್ಲೂರು: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಮುಂಜಾನೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಪಡೆದರು.ನಿನ್ನೆ ರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಕೊಲ್ಲೂರಿಗೆ ತೆರಳಿ ವಾಸ್ತವ್ಯ ಮಾಡಿದ್ದರು. ಇಂದು ಬೆಳಿಗ್ಗೆ
ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಮುಖ್ಯಮಂತ್ರಿಯವರನ್ನು ಗೌರವಿಸಲಾಯಿತು. ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಸತೀಶನ್ ಅವರು ಕೊಲ್ಲೂರಿಗೆ ಭೇಟಿ ನೀಡಿದ್ದಾರೆ. ಪೂಜೆ ಮುಗಿಸಿದ ನಂತರ ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಸತೀಶನ್ ಅವರು ಆಗಮಿಸಿದ್ದ ಹಿನ್ನೆಲೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.





