ನಾರ್ಥಾಂಪ್ಟನ್: ಯುವ ಆಟಗಾರ ವೈಭವ್ ಸೂರ್ಯವಂಶಿ ಮತ್ತೆ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ಮೂರನೇ ಯೂಥ್ ಏಕದಿನ ಪಂದ್ಯದಲ್ಲಿ ಭಾರತ ಯುವ ತಂಡ ಭರ್ಜರಿ ಜಯ ದಾಖಲಿಸಿದೆ. ಮೊದಲು ಬ್ಯಾಟ್ ಮಾಡಿದ ಆತಿಥೇಯ ಇಂಗ್ಲೆಂಡ್ ತಂಡ 40ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 268 ರನ್ ಸೇರಿಸಿತು. ಇದಕ್ಕೆ ಉತ್ತರವಾಗಿ
ಬ್ಯಾಟಿಂಗ್ ಆರಂಭಿಸಿದ ಭಾರತದ ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ 31 ಎಸೆತಗಳಲ್ಲಿ 6 ಬೌಂಡರಿ, 9 ಸಿಕ್ಸರ್ ಸಹಾಯದಿಂದ 86 ರನ್ ಸಿಡಿಸಿ ಅಬ್ಬರಿಸಿದರು.
ಟೀಮ್ ಇಂಡಿಯಾದ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಯೂತ್ ಏಕದಿನ ಪಂದ್ಯದ ಇನ್ನಿಂಗ್ಸ್ನಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ಭಾರತದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 34.3 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 274 ರನ್ ಬಾರಿಸಿ ಜಯ ಸಾಧಿಸಿತು. ಈ ಮೂಲಕ ಭಾರತ 5 ಪಂದ್ಯಗಳ ಯುತ್ ಏಕದಿನ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ.