ದೋಹಾ:ಭಾರತದ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಯುಎಇ ವಿರುದ್ಧ ಕೇವಲ 52 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ಲಿಸ್ಟ್ ‘ಎ’ ಕ್ರಿಕೆಟ್ನಲ್ಲಿ ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಅವರು 53 ಎಸೆತಗಳಲ್ಲಿ 28 ಸಿಕ್ಸರ್ 7 ಬೌಂಡರಿ ಒಳಗೊಂಡ 204 ರನ್ ಬಾರಿಸುವ ಮೂಲಕ ಅತಿವೇಗದ ದ್ವಿಶತಕ ಮತ್ತು ಅತಿ ಹೆಚ್ಚು ಸಿಕ್ಸರ್ಗಳ ದಾಖಲೆಯನ್ನು ಸೃಷ್ಠಿಸಿದ್ದಾರೆ.ಯುಎಇ ವಿರುದ್ಧದ
ಎಸಿಸಿ ಪುರುಷರ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026 ಪಂದ್ಯದಲ್ಲಿ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಲಿಸ್ಟ್ ಎ ಕ್ರಿಕೆಟ್ನಲ್ಲಿ ಅತ್ಯಂತ ವೇಗದ ಶತಕದ ವಿಶ್ವ ದಾಖಲೆಯನ್ನು ನಿರ್ಮಿಸಿದ್ದ ಅವರು ಇದೀಗ ಕೇವಲ 52 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ಮತ್ತೊಂದು ವಿಶ್ವದಾಖಲೆ ನಿರ್ಮಿಸಿದ್ದಾರೆ.
15 ವರ್ಷದ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪರ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದು, ಯುಎಇ ಬೌಲರ್ಗಳನ್ನು ಬೆಂಡೆತ್ತಿದರು. 250 ರನ್ಗಳ ಗುರಿ ಬೆನ್ನಟ್ಟಿದ ಭಾರತ ಎ ತಂಡಕ್ಕೆ ಅವರು ಸ್ಫೋಟಕ ಆರಂಭ ನೀಡಿದರು. ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವೈಭವ್, ನಂತರ 28 ಎಸೆತಗಳಲ್ಲಿ ಶತಕದ ಗಡಿ ತಲುಪಿದರು. ವೈಭವ್ ಸೂರ್ಯವಂಶಿ ತಮ್ಮ ಆಕ್ರಮಣಕಾರಿ ಆಟವನ್ನು ಮೊದಲ
ಓವರ್ನಿಂದಲೇ ಆರಂಭಿಸಿದರು. ಯುಎಇ ಬೌಲರ್ ಜಾಹಿದ್ ಅಲಿ ಎಸೆದ ಮೊದಲ ಓವರ್ನಲ್ಲಿ ಮೂರು ಸಿಕ್ಸರ್ ಸಿಡಿಸಿ ಎದುರಾಳಿ ತಂಡಕ್ಕೆ ಎಚ್ಚರಿಕೆ ನೀಡಿದರು.ವೈಭವ್ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸಿದರು ಇದರಲ್ಲಿ 14 ಮುಗಿಲೆತ್ತರದ ಸಿಕ್ಸರ್ಗಳು ಸೇರಿದ್ದವು. ಅಂದರೆ ಎರಡು ಎಸೆತಗಳಿಗೆ ಒಂದು ಸಿಕ್ಸರ್ನಂತೆ ಕೇವಲ 28 ಎಸೆತಗಳಲ್ಲಿ ವೈಭವ್ ಮೂರಂಕಿ ಮೊತ್ತ ದಾಖಲಿಸಿದರು. ಇದಾದ ಬಳಿಕವೂ ವೈಭವ್ ಅಬ್ಬರ ತಣ್ಣಗಾಗಲಿಲ್ಲ. ಕೇವಲ 40 ಎಸೆತಗಳಲ್ಲಿ 150 ರನ್ ಪೂರೈಸಿದ ವೈಭವ್, ಕೇವಲ 52 ಎಸೆತಗಳಲ್ಲಿ ದ್ವಿಶತಕ ಸಿಡಿಸುವ ಮೂಲಕ ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇದೀಗ ವೈಭವ್ ಸೂರ್ಯವಂಶಿ ಲಿಸ್ಟ್ ‘ಎ’ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿವೇಗದ ದ್ವಿಶತಕ ಸಿಡಿಸಿದ ಸಾಧನೆ ಮಾಡಿದ ಆಟಗಾರ ಎನ್ನುವ ಅಪರೂಪದ ದಾಖಲೆ ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಯುಎಇ ನೀಡಿದ್ದ 250 ರನ್ಗಳ ಗುರಿ ಬೆನ್ನಟ್ಟಿದ ಭಾರತ ಎ ತಂಡ 14.2 ಓವರ್ಗಳಲ್ಲಿ 3ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು.
















