ಮುಂಬೈ:ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಶೀಘ್ರದಲ್ಲೇ ಭಾರತ ತಂಡಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ.ತಮ್ಮ ಅಮೋಘ ಆಟದ ಮೂಲಕವೇ ಗಮನ ಸೆಳೆಯುತ್ತಿರುವ
ಅವರು ತಾರಾ ಬೌಲರ್ಗಳ ವಿರುದ್ಧ ಮೇಲುಗೈ ಸಾಧಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಹಾಗೂ ಈಗ ನಡೆಯುತ್ತಿರುವ ಐಪಿಎಲ್ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಅವರನ್ನು ಇದೇ ವರ್ಷದ ಜೂನ್ನಲ್ಲಿ ನಡೆಯಲಿರುವ ಐರ್ಲೆಂಡ್ ಪ್ರವಾಸದಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ವರದಿಯೊಂದು ತಿಳಿಸಿದೆ.ದೇಶೀಯ ಕ್ರಿಕೆಟ್ನಲ್ಲಿ ಬಿಹಾರವನ್ನು
ಪ್ರತಿನಿಧಿಸುವ ಸೂರ್ಯವಂಶಿ, ತಮ್ಮ ನಿರ್ಭೀತ ಬ್ಯಾಟಿಂಗ್ ಮೂಲಕವೇ ಗಮನ ಸೆಳೆಯುತ್ತಿದ್ದಾರೆ. ಅವರು ಐಪಿಎಲ್ನಲ್ಲಿ ಆಡಿರುವ 5 ಪಂದ್ಯಗಳಲ್ಲಿ 263.16 ರ ಅದ್ಭುತ ಸ್ಟ್ರೈಕ್-ರೇಟ್ನಲ್ಲಿ 200 ರನ್ಗಳನ್ನು ಗಳಿಸಿ ಆರೆಂಜ್ ಕ್ಯಾಪ್ ಕೂಡ ಪಡೆದುಕೊಂಡಿದ್ದಾರೆ. ಮಾತ್ರವಲ್ಲ, ಈಗಾಗಲೆ 2 ಸ್ಫೋಟಕ ಅರ್ಧಶತಕ ಕೂಡ ಸಿಡಿಸಿದ್ದಾರೆ.‘ಅವರು ಐರ್ಲೆಂಡ್ ಪ್ರವಾಸಕ್ಕೆ ಭಾರತ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.
ಐರ್ಲೆಂಡ್ನಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟಿ20 ಸರಣಿಗೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ, ಎರಡನೇ ಹಂತದ ಭಾರತ ತಂಡವನ್ನು ಕಳಿಸುವ ಸಾಧ್ಯತೆ ಇದೆ.
















