ಜೈಪುರ: ಐಪಿಎಲ್ 2025ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ 14 ವರ್ಷದ ವೈಭವ್ ಸೂರ್ಯವಂಶಿ ಅವರು ಐಪಿಎಲ್ನಲ್ಲಿ ಅತ್ಯಂತ ಕಿರಿಯ ಆಟಗಾರರಾಗಿ ಪಾದಾರ್ಪಣೆ ಮಾಡಿದ್ದಾರೆ. ಸಂಜು ಸ್ಯಾಮ್ಸನ್ ಗಾಯದಿಂದಾಗಿ ಈ ಪಂದ್ಯವನ್ನು ಆಡುತ್ತಿಲ್ಲವಾದ್ದರಿಂದ ವೈಭವ್ಗೆ ಈ ಅವಕಾಶ ಲಭಿಸಿದೆ. ಇದೀಗ 14 ವರ್ಷ, 23 ದಿನಗಳ ವಯಸ್ಸಿನಲ್ಲಿ ಐಪಿಎಲ್ಗೆ ಪಾದಾರ್ಪಣೆ ಮಾಡಿದ
ಅತ್ಯಂತ ಕಿರಿಯ ಆಟಗಾರನೆಂಬ ದಾಖಲೆ ವೈಭವ್ ಪಾಲಾಗಿದೆ. 2025, ಏಪ್ರಿಲ್ 19 ಐಪಿಎಲ್ ಇತಿಹಾಸದಲ್ಲಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಐಪಿಎಲ್ 2025 ರ 36ನೇ ಪಂದ್ಯದಲ್ಲಿ, ರಾಜಸ್ಥಾನ ರಾಯಲ್ಸ್ ಯುವ ಆಟಗಾರ ವೈಭವ್ ಸೂರ್ಯವಂಶಿ ಈ ಲೀಗ್ನಲ್ಲಿ ಪಾದಾರ್ಪಣೆ ಮಾಡುವ ಅವಕಾಶವನ್ನು ಪಡೆದಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಡಗೈ ಬ್ಯಾಟ್ಸ್ಮನ್ ವೈಭವ್ ಕೇವಲ 14 ವರ್ಷ ವಯಸ್ಸಿನಲ್ಲಿ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ. ಸಿಕ್ಕಿದ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡ ಸೂರ್ಯವಂಶಿ ಯಶಸ್ವಿ ಜೈಸ್ವಾಲ್ ಜೊತೆ ಭರ್ಜರಿ ಆರಂಭ ಒದಗಿಸಿದರು. ಮೊದಲ ವಿಕೆಟ್ಗೆ 8.1 ಓವರ್ಗಳಲ್ಲಿ ರನ್ 85 ಬಾರಿಸಿದರು. ಸೂರ್ಯವಂಶಿ ಕೇವಲ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹೀತ 34 ರನ್ ಸಿಡಿಸಿ ಔಟಾದರು. ಲೀಲಾಜಾಲವವಾಗಿ ಬ್ಯಾಟ್ ಬೀಸಿದ ಯುವ ಆಟಗಾರ ಬೌಂಡರಿ, ಸಿಕ್ಸರ್ ಸಿಡಿಸಿ ಗಮನ ಸೆಳೆದರು.














