ಸಂಪಾಜೆ: ಸಂಪಾಜೆ ವಲಯ ಕಾಂಗ್ರೆಸ್ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ರಾಜ್ಯ ನಿರ್ದೇಶಕರು ,ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾದ ಜಾನಿ.ಕೆ.ಪಿ ನೆರವೇರಿಸಿದರು. ಅವರು ಮಾತನಾಡಿ ನಮ್ಮ
ಹಿರಿಯರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಹೋರಾಟಗಾರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಜ್ಞಾನಶೀಲನ್ ರಾಜು, ವಲಯ ಕಾಂಗ್ರೆಸ್ ಪ್ರಭಾರ ಅಧ್ಯಕ್ಷರಾದ ವಸಂತ ಗೌಡ ಪೆಲ್ತಡ್ಕ, ಪ್ರಧಾನ ಕಾರ್ಯದರ್ಶಿ ಲೂಕಾಸ್ ಟಿ.ಐ ಬೆಂಜಮಿನ್ ಡಿಸೋಜ, ಶ್ರೀಧರ ಕೆ.ಕೆ, ಲೆಸ್ಸಿ ಮೊನಾಲಿಸಾ, ಡೊಮಿನಿಕ್ , ನಾಗಮುತ್ತು ನೆಲ್ಲಿಕುಮೇರಿ, ಫಿಲೋಮಿನಾ ಕ್ರಾಸ್ತ ಉಪಸ್ತಿತರಿದ್ದರು. ಲೂಕಾಸ್ ಟಿ.ಐ. ಕಾರ್ಯಕ್ರಮ ನಿರೂಪಿಸಿದರು.







































