ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರೀನ್ ವ್ಯೂ ಶಾಲೆಯ ಆಶ್ರಯದಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸುಳ್ಯದ ಗ್ರೀನ್ ವ್ಯೂ ಶಾಲಾ ವಠಾರದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್.ಹರಗಿ ಉದ್ಘಾಟಿಸಿದರು.ಸಂಸ್ಥೆಯ
ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ.ಮುಸ್ತಫ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಮೂಡಿತ್ತಾಯ, ಶಾಲಾ ಆಡಳಿತ ಸಮಿತಿ ಸಂಯೋಜಕ ಕೆ.ಎಸ್. ಉಮ್ಮರ್,ಶಾಫಿ ಕುತ್ತಮೊಟ್ಟೆ, ನಿರ್ದೇಶಕರಾದ ಎಸ್.ಎಂ. ಅಬ್ದುಲ್ ಹಮೀದ್, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಅಧ್ಯಕ್ಷ ಕೆ. ಬಿ. ಇಬ್ರಾಹಿಂ, ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ಮೂಸ ಕುಂಞಿ ಪೈಂಬೆಚ್ಚಾಲ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಎನ್.ಎ. ಅಬ್ದುಲ್ಲ ಮೊದಲಾದವರು ಉಪಸ್ಥಿತರಿದ್ದರು.ಶಿಕ್ಷಣ ಸಂಯೋಜಕಿ ಧನಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಗ್ರೀನ್ವ್ಯೂ ಶಾಲೆಯ ಮುಖ್ಯ ಶಿಕ್ಷಕ ಇಲ್ಯಾಸ್ ಕಾಶಿಪಟ್ಟಣ ಸ್ವಾಗತಿಸಿದರು. ಶಿಕ್ಷಕಿ ಜಯಂತಿ ವಂದಿಸಿದರು. ಶಿಕ್ಷಕ ರಂಜಿತ್ ಕಾರ್ಯಕ್ರಮ ನಿರೂಪಿಸಿದರು.














