ಸುಳ್ಯ:ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು.ರಾಜ್ಯ
ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಉದ್ಘಾಟಿಸಿದರು.ಎಸ್ ಎಸ್ ಎಲ್ ಸಿ, ಪಿ ಯು ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸನ್ಮಾನಿಸಿದರು. ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಮುಸ್ತಫ ಕ್ರೀಡಾ ಸಮವಸ್ತ್ರ ವಿತರಿಸಿದರು. ಎಡಮಂಗಲ ಸರಕಾರಿ ಪ್ರೌಢ ಶಾಲೆ ಸಹ ಶಿಕ್ಷಕ ಡಾ. ಸಂತೋಷ್ ಎಸ್. ಪಿ ಸoಸ್ಮರಣಾ ಉಪನ್ಯಾಸ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪಿ ಎಸ್ ಗಂಗಾಧರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಭವಾನಿ ಶಂಕರ ಕಲ್ಮಡ್ಕ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಕೃಷ್ಣ ಉಪಸ್ಥಿತರಿದ್ದರು.









