ಸುಳ್ಯ: ಆಲೆಟ್ಟಿಯಲ್ಲಿರುವ ವಾಲ್ಮೀಕಿ ಆಶ್ರಮ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಫೆ.17ರಂದು ಶಿಲಾನ್ಯಾಸ ನೆರವೇರಿಸಿದರು. ಅತ್ಯುತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣ ಮಾಡಬೇಕು. ಮುಂದಿನ ಜೂನ್ ವೇಳೆ ಶಾಲಾ ಪ್ರಾರಂಭೋತ್ಸವ ಸಂದರ್ಭದಲ್ಲಿ ನೂತನ ಕಟ್ಟಡ

ಲೋಕಾರ್ಪಣೆಗೆ ಸಿದ್ಧವಾಗುವಂತೆ ನಿರ್ಮಾಣ ಮಾಡುವಂತೆ ಶಾಸಕರು ಸೂಚಿಸಿದರು. ಎರಡು ಕೋಟಿ ಅನುದಾನದಲ್ಲಿ ಆಶ್ರಮ ಶಾಲೆಗೆ ನೂತನ ಕಟ್ಟಡ ನಿರ್ಮಾಣವಾಗಲಿದೆ.
ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ ವಸಂತ್, ತಾ.ಪಂ.ಮಾಜಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ಪ್ರಮುಖರಾದ ತೀರ್ಥರಾಮ ಕುಂಚಡ್ಕ, ಧನಂಜಯ ಕುಂಚಡ್ಕ, ಸತೀಶ್ ಕುಂಭಕ್ಕೋಡು, ಸುಧಾಕರ, ನಾಗರಾಜ ಬಡ್ಡಡ್ಕ, ಉದಯ ಕುಡೆಕಲ್ಲು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.





