ಸುಳ್ಯ: ಸುಳ್ಯ ತಾಲೂಕು ನಾಡ ಹಬ್ಬಗಳ ದಿನಾಚರಣಾ ಸಮಿತಿ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಉದ್ಘಾಟಿಸಿದರು. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್.ಎನ್, ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ, ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಸಿ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.