ಸುಳ್ಯ: ಶ್ರೀ ಮಹರ್ಷಿ ವಾಲ್ಮೀಕಿ ಧಾರೆಯೆರೆದ ಆದರ್ಶಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಸಮಾಜಕ್ಕೆ ಅಗತ್ಯವಾಗಿದೆ. ವಾಲ್ಮೀಕಿ ಅವರ ಆದರ್ಶಗಳು ಮುಂದಿನ ತಲೆಮಾರಿಗೆ ತಿಳಿಸುವ ಕೆಲಸ ಆಗಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಸುಳ್ಯ, ನಗರ ಪಂಚಾಯಿತಿ ಸುಳ್ಯ, ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ
ಶನಿವಾರ ತಾ.ಪಂ.ಸಭಾಂಗಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಸಿ, ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದ ಕೆಳವರ್ಗದಲ್ಲಿ ಜನಿಸಿದ ವಾಲ್ಮೀಕಿ ಮಹರ್ಷಿಯಾಗಿ ಇಡಿ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದು ಹೇಳಿದರು.
ವೇದಿಕೆಯಲ್ಲಿ ತಹಸೀಲ್ದಾರ್ ಎಂ. ಮಂಜುನಾಥ್, ನಗರ ಪಂಚಾಯಿತಿ ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್. ಬಿ.ಇ, ತಾಲೂಕು ಸಮಾಜಕಲ್ಯಾಣಧಿಕಾರಿ ಧನಂಜಯ, ನ.ಪಂ. ಸದಸ್ಯರಾದ ಬುದ್ದನಾಯ್ಕ್, ಶಶಿಕಲಾ ನೀರಬಿದಿರೆ, ಶೀಲಾ ಅರುಣಾ ಕುರುಂಜಿ, ಶಿಲ್ಪಾ ಸುದೇವ್, ಡೇವಿಡ್ ಧೀರಾ ಕ್ರಾಸ್ತಾ, ಕಿಶೋರಿ ಶೇಟ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತಾಲೂಕಿನ 139 ವಿದ್ಯಾರ್ಥಿಗಳಿಂದ ತಾಲೂಕು ಪಂಚಾಯಿತಿ ಅನುದಾನದಲ್ಲಿ ನೀಡಲಾಗುವ ಕ್ರೀಡಾ ಸಮವಸ್ತ್ರವನ್ನು ಭಾಗೀರಥಿ ಮುರುಳ್ಯ ವಿತರಣೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಕಾವ್ಯ ಸ್ವಾಗತಿಸಿ, ಪ್ರವೀಣ್ ಕುಮಾರ್ ವಂದಿಸಿದರು. ಇಲಾಖೆಯ ವಾರ್ಡನ್ ಆರ್ಸಿಯಾ ಕಾರ್ಯಕ್ರಮ ನಿರೂಪಿಸಿದರು.