ಸುಬ್ರಹ್ಮಣ್ಯ: ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಆಗಮಿಸುತ್ತಿದ್ದ ವ್ಯಾನ್ ಪಲ್ಟಿಯಾಗಿ ವಾಹನದಲ್ಲಿದ್ದ ಹಲವು ಮಂದಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ ಸಮೀಪ ಬಿಸಿಲೆ ಎಂಬಲ್ಲಿ ನಡೆದಿದೆ. ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆಗೆ ವನಗೂರಿನಿಂದ ಬರುತ್ತಿದ್ದ ವ್ಯಾನ್ ಬಿಸಿಲೆ ಗಡಿ ಸಮೀಪ ಅಪಘಾತಕ್ಕೀಡಾಗಿದೆ. ವ್ಯಾನ್ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆ ತರಲಾಗಿದೆ ಎಂದು ತಿಳಿದು ಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post















