ಅರಂತೋಡು: ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅರಂತೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಕ್ಲಬ್ ಸಹಯೋಗದೊಂದಿಗೆ ‘ವನಮಹೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಾಲಾ ಆವರಣದಲ್ಲಿ ವಿವಿಧ
ಜಾತಿಯ ಕಸಿ ಮಾಡಿದ ಹಣ್ಣಿನ ಗಿಡಗಳನ್ನು ನೆಡಲಾಯಿತು.ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಗಿಡಗಳ ಆರೈಕೆ ಹಾಗೂ ಪೋಷಣೆಯ ಬಗ್ಗೆ ಪ್ರಾಯೋಗಿಕ ಮಾಹಿತಿಯನ್ನು ನೀಡಲಾಯಿತು.
ಮಧುಸೂದನ್ ಅವರು ಪರಿಸರದ ಮಹತ್ವ ಮತ್ತು ಗಿಡಗಳನ್ನು ನೆಟ್ಟು ಅವುಗಳನ್ನು ಹೇಗೆ ಸಂರಕ್ಷಿಸಬೇಕು ಎಂಬುದರ ಕುರಿತು ಮಕ್ಕಳಿಗೆ ಮಾರ್ಗದರ್ಶನ ನೀಡಿದರು.
ರೋಟರಿ ಕ್ಲಬ್ ಅಧ್ಯಕ್ಷೆ ಲತಾ ಮಧುಸೂದನ್, ಡಾ.ರಾಮಮೋಹನ್, ಪ್ರಭಾಕರ ನಾಯರ್, ಯೋಗಿತಾ ಗೋಪಿನಾಥ್ – ನಳಿನಿ ಕಿರ್ಲಯ,ಚಂದ್ರಮತಿ, ಪ್ರಭಾಕರನ್ ಸಿ.ಎಚ್, ಗೋಪಿನಾಥ್, ಸತೀಶ್ ನಾಯ್ಕ್ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.







































