ಮಂಗಳೂರು :ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದ
ಕದ್ರಿ ಪಾರ್ಕ್ನಲ್ಲಿ ಶನಿವಾರ ನಡೆದ ಹಸಿರೇ ಉಸಿರು ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಗ್ರಾಮ ವಾಸ್ತವ್ಯ, ಬ್ರಾೃಂಡ್ ಮಂಗಳೂರಿನಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ‘ ಪತ್ರಕರ್ತರು ಪರಿಸರದ ಬಗ್ಗೆ ಕಾಳಜಿ ವಹಿಸಿ ಗಿಡಗಳನ್ನು ನೆಟ್ಟಿರುವುದು ಶ್ಲಾಘನೀಯ ಎಂದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ದ.ಕ.ವಾರ್ತಾ ಇಲಾಖೆಯ ಉಪ ನಿರ್ದೇಶಕ ಖಾದರ್ ಶಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಮಂಗಳೂರು ಮಹಾ ನಗರ ಪಾಲಿಕೆಯ ಜಂಟಿ ಅಯುಕ್ತ ಚಂದ್ರಶೇಖರಯ್ಯ, ಕಲಬುರಗಿ ಆಕಾಶವಾಣಿಯ ನಿವೃತ್ತ ನಿಲಯ ನಿರ್ದೇಶಕ ಸದಾನಂದ ಪೆರ್ಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪರಾಜ್.ಬಿ.ಎನ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ, ಹಿರಿಯ ಪತ್ರಕರ್ತರಾದ ರಮೇಶ್ ಪೆರ್ಲ ,ಪದ್ಮನಾಭ ಗಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು